ಒಟ್ಟು 107 ಕಡೆಗಳಲ್ಲಿ , 1 ವಚನಕಾರರು , 86 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಂತವೆಲ್ಲಕುಮಿರುವುದಿರಲಿ; ವಿಷಯೇಂದ್ರಿಯದ |ಸಂತಾಪವುಂ ಮುಗಿವುದೆಂಬುದಲ ಪುಣ್ಯ? ||ಎಂತೊ; ನಿನ್ನಾಜ್ಞೆಯಿನೂ; ತಾಂ ಸೋತೊ; ಬೇಸತ್ತೊ |ಶಾಂತಿವಡೆಯಲಿ ಕರಣ - ಮಂಕುತಿಮ್ಮ ||
ಅನುಭವದ ಪಾಲೊಳು ವಿಚಾರ ಮಂಥನವಾಗೆ |ಜನಿಯಿಕುಂ ಜ್ಞಾನನವನೀತವದೆ ಸುಖದಂ ||ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |ನಿನಗೆ ಧರುಮದ ದೀಪ - ಮಂಕುತಿಮ್ಮ ||
ಅನ್ನವುಣುವಂದು ಕೇಳ್; ಅದನು ಬೇಯಿಸಿದ ನೀರ್ |ನಿನ್ನ ದುಡಿತದ ಬೆಮರೊ; ಪೆರರ ಕಣ್ಣೀರೋ? ||ತಿನ್ನು ನೀಂ ಜಗಕೆ ತಿನಲಿತ್ತನಿತ; ಮಿಕ್ಕೂಟ |ಜೀರ್ಣಿಸದ ಋಣಶೇಷ - ಮಂಕುತಿಮ್ಮ ||
ಅರಿ ಮಿತ್ರ ಸತಿ ಪುತ್ರ ಬಂಧುಬಳಗವದೆಲ್ಲ |ಕರುಮದವತಾರಗಳೊ; ಋಣಲತೆಯ ಚಿಗುರೋ ||ಕುರಿಯನಾಗಿಸಿ ನಿನ್ನ ಕಾಪಿಡುವ ಸಂಸಾರ |ವುರಿಮಾರಿಯಾದೀತೊ - ಮಂಕುತಿಮ್ಮ ||
ಅರೆದಿನದ ನಮ್ಮ ಯತ್ನದಿನದೇನೆನ್ನದಿರು |ಕಿರಿದುಮೊಡಗೂಡಿರಲು ಸಿರಿಯಹುದು ಬಾಳ್ಗೆ ||ಪರಿಪೋಷಿಸದೆ ನಿನ್ನೊಡಲ ದಾರಿಮರದ ಫಲ? |ಕಿರುಜಾಜಿ ಸೊಗಕುಡದೆ? - ಮಂಕುತಿಮ್ಮ ||
ಅಷ್ಟದಿಗ್ಗಜವೆ ನೀನ್? ಆದಿಶೇಷನೆ ನೀನು? |ಕಷ್ಟಭಾರವಿದೆಂದು ನಿಟ್ಟುಸಿರ ಬಿಡುವೆ! ||ನಿಷ್ಠುರದ ನಿನ್ನ ಕನಿಕರ ಜಗಕೆ ಬೇಕಿಲ್ಲ |ಎಷ್ಟಾದರಷ್ಟೆ ಸರಿ - ಮಂಕುತಿಮ್ಮ ||
ಆರ ಕೈತುತ್ತಿಗಂ ನಿನ್ನ ಕಾಯಿಸದೆ ವಿಧಿ |ಯಾರ ಭುಜಕಂ ನಿನ್ನ ಭಾರವಾಗಿಸದೆ ||ಆರ ಸೆಲೆ ಸುಳಿವುಮಂಟದವೊಲಾಗಿಸಿ ನಿನ್ನ |ಪಾರಗಾಣಿಸ ಬೇಡು - ಮಂಕುತಿಮ್ಮ ||
ಆಶೆ ಬಲೆಯನು ಬೀಸಿ; ನಿನ್ನ ತನ್ನೆಡೆಗೆಳೆದು |ಘಾಸಿ ನೀಂ ಬಡುತ ಬಾಯ್ಬಿಡಲೋರೆ ನೋಡಿ ||ಮೈಸವರಿ ಕಾಲನೆಡವಿಸಿ; ಗುಟ್ಟಿನಲಿ ನಗುವ |ಮೋಸದಾಟವೊ ದೈವ - ಮಂಕುತಿಮ್ಮ ||
ಇಂದ್ರಿಯವ ಜಯಿಸಿದೆಯೊ? ಮಂದವೋ ನಿನ್ನಕ್ಷಿ? |ಸೌಂದರ್ಯ ಯಕ್ಷಿಣಿಯೆ ನಿನ್ನ ತೊರೆದಿಹಳೋ? ||ಅಂಧನೆ ವಿರಕ್ತನ್; ಅಪ್ಸರೆಯ ಕಾಣದನೆ ಯತಿ |ಕಂಡು ಕೆರಳದನಾರೊ! - ಮಂಕುತಿಮ್ಮ ||
ಇನ್ನೇನು ಮತ್ತೇನು ಗತಿಯೆಂದು ಬೆದರದಿರು |ನಿನ್ನ ಕೈಯೊಳಗಿಹುದೆ ವಿಧಿಯ ಲೆಕ್ಕಣಿಕೆ? ||ಕಣ್ಣಿಗೆಟುಕದೆ ಸಾಗುತಿಹುದು ದೈವದ ಸಂಚು |ತಣ್ಣಗಿರಿಸಾತ್ಮವನು - ಮಂಕುತಿಮ್ಮ ||
ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ |ಫಲ ಮಾಗುವಂದು ತುತ್ತೂರಿ ದನಿಯಿಲ್ಲ ||ಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲ |ಹೊಲಿ ನಿನ್ನ ತುಟಿಗಳನು - ಮಂಕುತಿಮ್ಮ ||
ಋಣದ ಮೂಟೆಯ ಹೊರಿಸಿ; ಪೂರ್ವಾರ್ಜಿತದ ಹುರಿಯ |ಕುಣಿಕೆಯಲಿ ನಿನ್ನ ಕೊರಳನು ಬಿಗಿದು ವಿಧಿಯು ||ತೃಣದ ಕಡ್ಡಿಯ ಮುಂದೆ ಹಿಡಿದಾಶೆ ತೋರುತಿರೆ |ಕುಣಿವ ಗರ್ದಭ ನೀನು - ಮಂಕುತಿಮ್ಮ ||
ಎಣಿಕೆಯೊಳಿತಾದೊಡೆಯುಮೊಳಿತನಾಗಿಸದು ಹಟ |ಮಣಿಕನಕ ಸಂಕೋಲೆ ತನುವ ಬಂಧಿಸದೇಂ? ||ತನಯನಿರಿದಸಿ ನಿನ್ನ ಮೈಯ ಹುಣ್ಣಾಗಿಸದೆ? |ಮನ ಸರ್ವಸಮವಿರಲಿ - ಮಂಕುತಿಮ್ಮ ||
ಎಂದಿಗಾನುಂ ನಿನ್ನ ಪೂರ್ವಋಣಗಳ ಲೆಕ್ಕ |ನೊಂದಬೇಕೆಂದಿರ್ದೊಡಿಂದೆ ಮೊದಲನಿಡು ||ಅಂದಿಸಿಕೊ ಹೆರರೆನಿಪರನು ಹೃದಯವಿಸ್ತರದೆ |ಹೊಂದು ವಿಶ್ವಾತ್ಮತೆಯ - ಮಂಕುತಿಮ್ಮ ||
ಎಂದೊ ನಿನಗೊಂದುದಿನ ಮೂಗು ಮುರಿಯುವುದು ದಿಟ |ವೃಂದಾರಕರು ಮತ್ಸರಿಸರೆ ಗರ್ವಿತರ? ||ಸಂದರ್ಭಗಳನದಕೆ ಜೋಡಿಪನು ವಿಧಿರಾಯ |ಅಂದಿಕೊಳ್ಳನೆ ನಿನ್ನ? - ಮಂಕುತಿಮ್ಮ ||