ಒಟ್ಟು 10 ಕಡೆಗಳಲ್ಲಿ , 1 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಜೀವನವದೊಂದು ಕಲೆ; ಕಲೆಯ ಕಲಿಸುವುದೆಂತು? |ಸಾವಿರದ ನಿಯಮ ಯುಕ್ತಿಗಳನೊರೆದೊಡೆಯುಂ ||ಆವುದೋ ಕುಶಲತೆಯದೊಂದಿರದೆ ಜಯವಿರದು |ಆ ವಿವರ ನಿನ್ನೊಳಗೆ - ಮಂಕುತಿಮ್ಮ ||
ತರಣಿಶಶಿಪಥಗಳನು; ಧರೆವರುಣಗತಿಗಳನು |ಮರುದಗ್ನಿವೇಗಗಳ ನಿಯಮಿಸಿಹ ದಕ್ಷನ್ ||ನರನರಸಿಕೊಳಲಿ ದಾರಿಯ ತನಗೆ ತಾನೆಂದು |ತೊರೆದನೇತಕೆ ನಮ್ಮ? - ಮಂಕುತಿಮ್ಮ ||
ದ್ವೈತವೇನದ್ವೈತವೇನಾತ್ಮದರ್ಶನಿಗೆ? |ಶ್ರೌತಾದಿವಿಧಿಯೇನು? ತಪನಿಯಮವೇನು? ||ನೀತಿ ಸರ್ವಾತ್ಮಮತಿಯದರಿನಮಿತಪ್ರೀತಿ |ಭೀತಿಯಿಲ್ಲದನವನು - ಮಂಕುತಿಮ್ಮ ||
ಪರಬೊಮ್ಮನೀ ಜಗವ ರಚಿಸಿದವನಾದೊಡದು |ಬರಿಯಾಟವೋ ಕನಸೊ ನಿದ್ದೆ ಕಲವರವೋ? ||ಮರುಳನವನಲ್ಲದೊಡೆ ನಿಯಮವೊಂದಿರಬೇಕು |ಗುರಿಗೊತ್ತದೇನಿಹುದೊ? - ಮಂಕುತಿಮ್ಮ ||
ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ? |ಮೀನು ನೀರೊಳು ನುಸುಳೆ ಪಥನಿಯಮವಿಹುದೆ? ||ಏನೊ ಜೀವವನೆಳೆವುದೇನೊ ನೂಕುವುದದನು |ನೀನೊಂದು ಗಾಳಿಪಟ - ಮಂಕುತಿಮ್ಮ ||
ಮಲಗಿದೋದುಗನ ಕೈಹೊತ್ತಗೆಯು ನಿದ್ದೆಯಲಿ |ಕಳಚಿ ಬೀಳ್ವುದು; ಪಕ್ವಫಲವಂತು ತರುವಿಂ ||ಇಳೆಯ ಸಂಬಂಧಗಳು ಸಂಕಲ್ಪನಿಯಮಗಳು |ಸಡಿಲುವುವು ಬಾಳ್ ಮಾಗೆ - ಮಂಕುತಿಮ್ಮ ||
ರಾಮಣೀಯಕದಿ ನಲಿವಕ್ಷಿಯೊಡನಚಲಮನ |ಪ್ರೇಮಮಯಮನದೊಡನೆ ಮೋಹಬಡದಾತ್ಮ ||ಭೀಮಬಲದೊಡನೆ ರಾಮನ ಅಭಯ ನಿಯಮವಿರೆ |ಯಾಮಳ ವರಂಗಳವು - ಮಂಕುತಿಮ್ಮ ||
ಶಕ್ತಿಮೀರ್ದ ಪರೀಕ್ಷೆಗಳನು ವಿಧಿ ನಿಯಮಿಸಿರೆ |ಯುಕ್ತಿಮೀರ್ದ ಪ್ರಶ್ನೆಗಳನು ಕೇಳುತಿರೆ ||ಚಿತ್ತವನು ತಿರುಗಿಸೊಳಗಡೆ; ನೋಡು; ನೋಡಲ್ಲಿ |ಸತ್ತ್ವದಚ್ಛಿನ್ನ ಝರಿ - ಮಂಕುತಿಮ್ಮ ||
ಹರ್ಮ್ಯಾಗ್ರಕೇರಿ ಸೋಪಾನದಿನತೀತನಹೆ |ನಿರ್ಮಮತೆಗೇರಿ ಕರ್ಮಾತೀತನಪ್ಪೆ ||ಬ್ರಹ್ಮಪದದಿಂದ ಧರ್ಮಾಧರ್ಮಗಳ ನಿಯಮ |ನಿರ್ಮಾಲ್ಯವಾಗುವುದು - ಮಂಕುತಿಮ್ಮ ||
ಹೋರು ಧೀರತೆಯಿಂದ; ಮೊಂಡುತನದಿಂ ಬೇಡ |ವೈರ ಹಗೆತನ ಬೇಡ; ಹಿರಿ ನಿಯಮವಿರಲಿ ||ವೈರಾಗ್ಯ ಕಾರುಣ್ಯ ಮೇಳನವೆ ಧೀರತನ |ಹೋರುದಾತ್ತತೆಯಿಂದ - ಮಂಕುತಿಮ್ಮ ||