ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರ್ಣವವ ಕಣ್ಣಿಂದೆ ಕಂಡ ಬೆರಗಾದೀತೆ |ವರ್ಣನೆಯನೋದಿದೊಡೆ; ತೆರೆಯನೆಣಿಸಿದೊಡೆ? ||ಪೂರ್ಣವಸ್ತುಗ್ರಹಣವಪರೋಕ್ಷದಿಂದಹುದು |ನಿರ್ಣಯ ಪ್ರತ್ಯಕ್ಷ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಜೀವಋಣಗಳ ಲೆಕ್ಕದಾದಿಯರಿಯದ ನಾವು |ಆವುದನು ಸರಿಯೆನುವ? ತಪ್ಪಾವುದೆನುವ? ||ಓವೊ ಬಿಡು ಕಡುಕಷ್ಟ ನೀತಿನಿರ್ಣಯದ ಹೊರೆ |ದೈವವದ ಹೊರಲಿ ಬಿಡು - ಮಂಕುತಿಮ್ಮ ||

ದಂಡನಿರ್ಣಯದಿ ನೀಂ ಕ್ಷಮಿಸೆನಲ್ ನ್ಯಾಯಪತಿ |ಹಿಂದಿನಾ ನಿನ್ನೊಳ್ತನವನ್ ಅಂದಿನಳಲನ್ ||ತಂದೆಬಗೆಯಿಂ ಬಗೆದು ಶಾಸನೋಗ್ರವನಿನಿತು |ಕುಂದಿಸಲಿಕಾಗದೇಂ? - ಮಂಕುತಿಮ್ಮ ||

ದೇವರದಿದೆಲ್ಲ ದೇವರಿಗೆಲ್ಲವೆಂದೊರಲು- |ತಾವುದನುಮವನ ನಿರ್ಣಯಕೆ ಬಿಡದೆಯೆ ತಾಂ ||ದಾವನ್ತಬಡುತ ತನ್ನಿಚ್ಛೆಯನೆ ಘೋಷಿಸುವ |ಭಾವವೆಂತಹ ಭಕುತಿ? - ಮಂಕುತಿಮ್ಮ ||

ಧರ್ಮನಿರ್ಣಯ ನಿನಗೆ ಜನ್ಮಜನ್ಮಾಂತರದ |ಕರ್ಮಸಂದರ್ಭದಿಂದೊಗೆವುದದನರಿತು ||ನಿರ್ಮಮದ ನಿರ್ಮಲೋತ್ಸಹದ ನೀನಾಚರಿಸೆ |ಬ್ರಹ್ಮ ಸಾಮೀಪ್ಯವೆಲೊ - ಮಂಕುತಿಮ್ಮ ||

ನ್ಯಾಯಾಧಿಪತಿ ತನ್ನ ಮತಿ ಮನಸುಗಳನೆಲ್ಲ |ಸ್ವೀಯಲಾಭಸ್ಮರಣೆಯುಳಿದು ವಿವದಿಗಳಾ ||ದಾಯನಿರ್ಣಯಕೆ ಯೋಜಿಸುವಂತೆ; ನೀಂ ಜಗದ |ಶ್ರೇಯಸ್ಸಿಗುಜ್ಜುಗಿಸು - ಮಂಕುತಿಮ್ಮ ||

ಹತ್ಯೆಯೋ ಹನ್ಯತೆಯೊ ವಿಜಯವೋ ಪರಿಭವವೊ |ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ||ಕೃತ್ಯನಿರ್ಣಯ ಬಾಹ್ಯಲಾಭನಷ್ಟದಿನಲ್ಲ |ಆತ್ಮಋಣವದು ಜಗಕೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ