ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅತಿಶಯದದೃಷ್ಟ ಹುಟ್ಟಿಂ ಮೃತೇಂದ್ರಿಯನದಲ? |ಇತರರೊಳು ವಿಷಪರೀಕ್ಷೆಗೆ ನಿಲುವರಾರು? ||ಮಿತಕುಕ್ಷಿ ಮಿತಭುಕ್ತ; ಮತ್ತಾರ್ ಜಿತೇಂದ್ರಿಯನು? |ಅತಿಚರ್ಚೆ ಸಲದಲ್ಲಿ - ಮಂಕುತಿಮ್ಮ ||
ಒರ್ವನೆ ನಿಲುವೆ ನೀನುತ್ಕಟಕ್ಷನಗಳಲಿ |ಧರ್ಮಸಂಕಟಗಳಲಿ; ಜೀವಸಮರದಲಿ ||ನಿರ್ವಾಣದೀಕ್ಷೆಯಲಿ; ನಿರ್ಯಾಣಘಟ್ಟದಲಿ |ನಿರ್ಮಿತ್ರನಿರಲು ಕಲಿ - ಮಂಕುತಿಮ್ಮ ||
ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ |ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲವದಕೆ ||ಬದುಕೇನು ಸಾವೇನು ಸೊದೆಯೇನು ವಿಷವೇನು? |ಉದಕಬುದ್ಬುದವೆಲ್ಲ! - ಮಂಕುತಿಮ್ಮ ||
ಮೇರುಪರ್ವತಕಿಹುವು ನೂರೆಂಟು ಶಿಖರಗಳು |ದಾರಿ ನೂರಿರಬಹುದು; ನಿಲುವ ಕಡೆ ನೂರು ||ಸಾರು ನೀಂ ಯಾತ್ರಿಕರಿಗೆಲ್ಲ ಕೆಳೆಯಾಗಿರುತೆ |ಮೇರುಸಂಸ್ಕೃತಿಯೆ ಬಲ - ಮಂಕುತಿಮ್ಮ ||
ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ |ಜೀವನಪರೀಕ್ಷೆ ಬಂದಿದಿರು ನಿಲುವನಕ ||ಭಾವಮರ್ಮಂಗಳೇಳುವುವಾಗ ತಳದಿಂದ |ದೇವರೇ ಗತಿಯಾಗ - ಮಂಕುತಿಮ್ಮ ||