ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆತುರತೆಯಿರದ ಸತತೋದ್ಯೋಗ ಸರ್ವಹಿತ |ಭೂತದಾವೇಶವಾತುರತೆಯಾತ್ಮಕ್ಕೆ ||ಕಾತರನು ನೀನಾಗೆ ಮೂರನೆಯ ಸಹಭಾಗಿ |ಪ್ರೀತನಾಗುವನೇನೊ? - ಮಂಕುತಿಮ್ಮ ||
ತ್ಯಜಿಸಿ ಭುಜಿಸಲ್ಕಲಿತವನೆ ಜಗಕೆ ಯಜಮಾನ |ನಿಜಕುಕ್ಷಿಚಿಂತೆಯೇಂ ಮೊದಲು ಮನೆತಾಯ್ಗೆ? ||ಭುಜಿಪ ಪತಿಸುತರೊಪ್ಪು ತುಪ್ಪವವಳೂಟಕ್ಕೆ |ಭಜಿಸು ನೀನಾ ವ್ರತವ - ಮಂಕುತಿಮ್ಮ ||
ಧರ್ಮನಿರ್ಣಯ ನಿನಗೆ ಜನ್ಮಜನ್ಮಾಂತರದ |ಕರ್ಮಸಂದರ್ಭದಿಂದೊಗೆವುದದನರಿತು ||ನಿರ್ಮಮದ ನಿರ್ಮಲೋತ್ಸಹದ ನೀನಾಚರಿಸೆ |ಬ್ರಹ್ಮ ಸಾಮೀಪ್ಯವೆಲೊ - ಮಂಕುತಿಮ್ಮ ||
ಪೆರತೊಂದು ಬಾಳ ನೀನಾಳ್ವ ಸಾಹಸವೇಕೆ? |ಹೊರೆ ಸಾಲದೇ ನಿನಗೆ; ಪೆರರ್ಗೆ ಹೊಣೆವೋಗೆ? ||ಮರದಿ ನನೆ ನೈಜದಿಂದರಳೆ ಸೊಗವೆಲ್ಲರ್ಗೆ |ಸೆರೆಮನೆಯ ಸೇಮವೇಂ? - ಮಂಕುತಿಮ್ಮ ||
ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||ನಿತ್ಯಜೀವನದಿ ನೀನಾ ನಯವನನುಸರಿಸೊ |ಸ್ವತ್ವದಾಶೆಯ ನೀಗಿ - ಮಂಕುತಿಮ್ಮ ||
ಮನೆಯ ಸುಡುತಿಹ ಬೆಂಕಿಯುರಿಯನಾರಿಸೆ ನುಗ್ಗು |ಮನವ ಸುಡುವುರಿಯಿಂದ ದೂರ ನೀಂ ನಿಲ್ಲು ||ತನುವಿಗುಪಕೃತಿಗೆಯ್ವ ಭರದಿ ನೀನಾತುಮದ |ಅನುನಯವ ಕೆಡಿಸದಿರು - ಮಂಕುತಿಮ್ಮ ||
ಮರಣಶಯ್ಯೆಯದೆಂದು ತಿಳಿದೊಡಂ ರೋಗಿಯನು |ಹರಣಮಿರುವನ್ನೆಗಂ ಪರಿಚರಿಸುವಂತೆ ||ಸ್ಥಿರವಲ್ಲವೀ ಲೋಕವಾದೊಡಮದುಳ್ಳನಕ |ಚರಿಸು ನೀನಾಳಾಗಿ - ಮಂಕುತಿಮ್ಮ ||
ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ |ಕಂಪಿಸುವ ಕೇಂದ್ರ ನೀಂ ಬ್ರಹ್ಮಕಂದುಕದಿ ||ಶಂಪಾತರಂಗವದರೊಳು ತುಂಬಿ ಪರಿಯುತಿದೆ |ದಂಭೋಳಿ ನೀನಾಗು - ಮಂಕುತಿಮ್ಮ ||
ಸೌಂದರ್ಯದೊಳ್ ದ್ವಂದ್ವ; ಬಾಂಧವ್ಯದೊಳ್ ದ್ವಂದ್ವ |ದ್ವಂದ್ವವೀ ಲೋಕ ಸಹವಾಸಗಳೊಳೆಲ್ಲ ||ಮುಂದೆ ನೀನಾವುಭಯಗಳ ದಾಟಿ ಸಾಗುತಿರೆ |ಬಂಧಮೋಚನ ನಿನಗೆ - ಮಂಕುತಿಮ್ಮ ||