ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಷ್ಟದಿಗ್ಗಜವೆ ನೀನ್? ಆದಿಶೇಷನೆ ನೀನು? |ಕಷ್ಟಭಾರವಿದೆಂದು ನಿಟ್ಟುಸಿರ ಬಿಡುವೆ! ||ನಿಷ್ಠುರದ ನಿನ್ನ ಕನಿಕರ ಜಗಕೆ ಬೇಕಿಲ್ಲ |ಎಷ್ಟಾದರಷ್ಟೆ ಸರಿ - ಮಂಕುತಿಮ್ಮ ||
ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |ಎದೆಯುಬ್ಬೆಗವನೊಂದಿ ಕುದಿಯುತಿಹುದೇಕೋ? ||ಅಧಿಕಾರಪಟ್ಟವನು ನಿನಗಾರು ಕಟ್ಟಿಹರು? |ವಿಧಿಯ ಮೇಸ್ತ್ರಿಯೆ ನೀನು? - ಮಂಕುತಿಮ್ಮ ||
ಕುಸುಮಸಖನೇಂ ನೀನು? ಹಿಸುಕದೆಯೆ ಮೂಸದನು |ಹಿಸುಕೆ ಕಟುಕಂಪು; ನರಲೋಕವದರವೊಲೇ ||ಗಸಿಯ ಕಲಕದೆ ಕೊಳದ ಮೇಲ್ತಿಳಿಯ ಕುಡಿದು ನಡೆ |ಹಸನು ಹಗುರದ ಬಾಳು - ಮಂಕುತಿಮ್ಮ ||
ದಾರಿಗುರಿಗಳ ಗೊತ್ತು ಕಗೆಗುಂಟೇನಯ್ಯಾ? |ಆರ ಮನೆ ಸಂಡಿಗೆಯೊ; ಚುಂಡಿಲಿಯೊ; ಹುಳುವೋ ||ಆರ ಪಿಂಡವೊ; ಏನೊ; ಎಂತೊ; ಆ ಬಾಳ ಗತಿ! |ಮೀರಿದವನೇಂ ನೀನು? - ಮಂಕುತಿಮ್ಮ ||
ಧಾತನೆಣ್ಣೆಯಗಾಣದೆಳ್ಳುಕಾಳಲೆ ನೀನು? |ಆತನೆಲ್ಲರನರೆವನ್; ಆರನುಂ ಬಿಡನು ||ಆತುರಂಗೊಳದೆ ವಿಸ್ಮೃತಿಬಡದುಪೇಕ್ಷಿಸದೆ |ಘಾತಿಸುವನೆಲ್ಲರನು - ಮಂಕುತಿಮ್ಮ ||
ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? |ಕಸದೊಳಗೆ ಕಸವಾಗಿ ಹೋಹನಲೆ ನೀನು? ||ಮುಸುಕಲೀ ಧರೆಯ ಮರೆವೆನ್ನನ್; ಎನ್ನುತ ಬೇಡು |ಮಿಸುಕದಿರು ಮಣ್ಣಿನಲಿ - ಮಂಕುತಿಮ್ಮ ||