ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ |ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ||ದಿನವ ಕಳೆ; ಗುರುಶಿಷ್ಯಪಟ್ಟಗಳು ನಿನಗೇಕೆ? |ನಿನಗೆ ನೀನೇ ಗುರುವೊ - ಮಂಕುತಿಮ್ಮ ||
ನಿನ್ನ ಕಣ್ ಕಿವಿ ಮನಗಳರಿವಷ್ಟು ನಿನ್ನ ಜಗ |ನಿನ್ನನಳಿಸುವ ನಗಿಸುವೆಲ್ಲ ನಿನ್ನಂಶ ||ಉನ್ನತಿಗೆ ನೀನೇರಿದಂತೆ ಜಗ ವಿಸ್ತರಿಸಿ |ಸಣ್ಣತನ ಸವೆಯುವುದು - ಮಂಕುತಿಮ್ಮ ||
ಬೀಳಿಸದಿರೆಲೊ ನಿನ್ನ ನೆರಳನಿತರರ ಮೇಲೆ |ಬಾಳಿಕೊಳುಗವರು ತಂತಮ್ಮ ಬೆಳಕಿನಲಿ ||ಮೇಲುಬೀಳುಗಳಾರ್ಗದೆಂತೊ ನೀನೇನರಿವೆ? |ತಾಳದಿರು ಗುರುತನವ - ಮಂಕುತಿಮ್ಮ ||