ಒಟ್ಟು 22 ಕಡೆಗಳಲ್ಲಿ , 1 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರುಣೋದಯಪ್ರಭೆಯ; ಗಿರಿಶೃಂಗದುನ್ನತಿಯ |ವರುಣಾಲಯಾಯತಿಯ ನಿರುಕಿಸಿದೊಡಹುದೇಂ? ||ಬೆರಗು; ಬರಿಬೆರಗು; ನುಡಿಗರಿದೆನಿಪ್ಪಾನಂದ |ಪರಮಪೂಜೆಯುಮಂತು - ಮಂಕುತಿಮ್ಮ ||
ಆರೋಗ್ಯಭಾಗ್ಯವನು ಮನಕೆ ತನುಗೆಂತಂತೆ |ಹಾರಯಿಸುವೊಡೆ ಹಲವು ಸರಳನೀತಿಗಳ ||ಧಾರಯಿಸು ನೆನಸಿನಲಿ ನುಡಿಯಲ್ಲಿ ನಡತೆಯಲಿ |ಪಾರಾಗು ಸುಳಿಯಿಂದ - ಮಂಕುತಿಮ್ಮ ||
ಏನಾನುಮಂ ಮಾಡು ಕೈಗೆ ದೊರತುಜ್ಜುಗವ |ನಾನೇನು ಹುಲುಕಡ್ಡಿಯೆಂಬ ನುಡಿ ಬೇಡ ||ಹೀನಮಾವುದುಮಿಲ್ಲ ಜಗದ ಗುಡಿಯೂಳಿಗದಿ |ತಾಣ ನಿನಗಿಹುದಲ್ಲಿ - ಮಂಕುತಿಮ್ಮ ||
ಕರುಮ ಬಂದಿದಿರಹುದು ಮೋಹನದ ರೂಪಿನಲಿ |ಕಿರುನಗುವು ಕುಡಿನೋಟ ಕೊಂಕುನುಡಿಗಳಲಿ ||ಕರೆದು ತಳ್ಳುವ; ತಳ್ಕರಿಸುತೊಳಗೆ ಕಿಚ್ಚಿಡುವ |ತರಳತೆಯದೇಂ ತಂತ್ರ? - ಮಂಕುತಿಮ್ಮ ||
ಕ್ಲೇಶ ನೂರಾಗಿರೆಯುಮಾಶೆಗಳ ಪುನರುದಯ |ಬೇಸರದ ನುಡಿಯೊಳಂ ಲೇಸುಗಳ ನೆನಪು ||ಆಶೆ ಸಾಯ್ತೆಂದೊಡಂ ಚೆಲುವೆನಲು ಕಣ್ಣಲೆತ |ಮಾಸವೀ ಜೀವಗುಣ - ಮಂಕುತಿಮ್ಮ ||
ತಳಿರ ನಸುಕೆಂಪು; ಬಳುಕೆಲೆಯ ಹಸುರಿನ ಸೊಂಪು |ತಿಳಿಮನದ ಯುವಜನದ ನಗುಗಣ್ಣ ಹೊಳಪು ||ಬೆಳೆವರಿವು ಮಗುದುಟಿಯಿನುಣ್ಮಿಸುವ ನುಡಿಚಿಗುರು |ಇಳೆಯೊಳಿವನೊಲ್ಲನಾರ್? - ಮಂಕುತಿಮ್ಮ ||
ತಿರಿದನ್ನವುಂಬಂಗೆ ಹುರುಡೇನು; ಹಟವೇನು |ತಿರುಪೆಯಿಡುವರು ಕುಪಿಸಿ ಬಿರುನುಡಿಯ ನುಡಿಯೆ ||ದುರದುರನೆ ನೋಡಿ ನೀನೆದುರುನುಡಿ ನುಡಿಯುವುದೆ? |ಗರುವವೇತಕೆ ನಿನಗೆ? - ಮಂಕುತಿಮ್ಮ ||
ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿ |ತಡಕಿ ನಾವಾಯ್ದಾಯ್ದು ನುಡಿಜೋಡಿಪಂತೆ ||ಬಿಡಿಜೀವ ಸಂಗಾತಿಜೀವಗಳನರಸಿ ತಾಂ |ಪಡೆದಂದು ಪೂರ್ಣವದು - ಮಂಕುತಿಮ್ಮ ||
ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ |ಖಂಡಿತದಿ ಸೇತುವೆಯ ಕಟ್ಟುವೊಡೆ ನೀವು ||ಕಂಡಿಹಿರ ನರಹೃದಯದಾಳ ಸುಳಿ ಬಿರುಬುಗಳ? |ದಂಡವದನುಳಿದ ನುಡಿ - ಮಂಕುತಿಮ್ಮ ||
ಬಾಳ ಸಿರಿ ಸೊಗಸುಗಳ ಪೆರ್ಚಿಪನು ಖೇಲಕನು |ಕೀಳದೆನಿಪವನೊರಟ; ಮಂಕ; ಕಲ್ಲೆದೆಗ ||ತೋಳಿಂದೆ ತಿಳಿವಿಂದೆ ನುಡಿಯಿಂದೆ ಜಗದಿರವ |ಮೇಲೆನಿಪವನೆ ರಸಿಕ - ಮಂಕುತಿಮ್ಮ ||
ಮತಿಗರ್ಥವಾದೊಡೇಂ? ಸ್ಮೃತಿಯೊಳದು ನೆಲಸಿರಲಿ |ಸತತ ಸಂಧಾನದಲಿ ಪರಮಾರ್ಥವಿರಲಿ ||ಶತಲಕ್ಷಧನದ ಲೆಕ್ಕವ ಬಾಯಿ ನುಡಿದೊಡೇಂ? |ಭೃತಿಯೆಷ್ಟು ವೆಚ್ಚಕ್ಕೆ? - ಮಂಕುತಿಮ್ಮ ||
ಮರುಕದುಂಬಿದ ಕಣ್ಣನೋಟದೊಳಗಿದ್ದೀತು |ಬಿರುನುಡಿಯೊಳಿರದೊಂದು ಕೂರಲಗು; ಸಖನೆ ||ಕರವಾಳಕದಿರದಿಹ ದುರಿತಕಾರಿಯ ಹೃದಯ |ಕರುಣೆಯಿಂ ಕರಗೀತೊ - ಮಂಕುತಿಮ್ಮ ||
ಮಾನಸವ ಚಿಂತೆವಿಡಿದಂದೊರ್ವನೆರಡಾಗಿ |ತಾನದಾರೊಳೊ ವಾದಿಸುವನಂತೆ ಬಾಯಿಂ ||ದೇನನೋ ನುಡಿಯುತ್ತ ಕೈಸನ್ನೆಗೈಯುವನು |ಭಾನವೊಂದರೊಳೆರಡು - ಮಂಕುತಿಮ್ಮ ||
ವ್ಯರ್ಥವೆಂದೆನಿಪುದಲ ಸೃಷ್ಟಿಯಲಿ ಬಹುಭಾಗ? |ಅರ್ಥವೇಂ ಕ್ರಿಮಿಕೀಟಕೋಟಿ ರಚನೆಯಲಿ? ||ಕರ್ತನಾಲೋಚಿಸದ ದುಂದಿನವನೆಂಬ ನುಡಿ |ಯರ್ಧದೃಷ್ಟಿಯ ವಿವರ - ಮಂಕುತಿಮ್ಮ ||
ಸಾಧ್ಯಪಡದಾರಿಗಂ ನರಭಾಲಪಟ್ಟವನು |ಶುದ್ಧಪಡಿಸಲು ತೊಡೆದು ಪೂರ್ವದೆಲ್ಲವನು ||ಹೊದ್ದೆ ಹರಿಯಲಿ ಬೇಕು ಕರ್ಮಶೇಷದ ಪಟವ |ಬುದ್ಧಿನುಡಿ ಸೈರಣೆಯೆ - ಮಂಕುತಿಮ್ಮ ||