ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ದೊರೆಗೆ ನೀಂ ಬಿನ್ನಯಿಸೆ ನೂರೆಂಟು ಬಯಕೆಗಳ |ಸರಿ ತನಗೆ ತೋರ್ದನಿತನ್ ಅದರೊಳವನೀವಂ ||ಅರಿಕೆಯೆಲ್ಲವ ನಡಸದಿರೆ ದೊರೆಯೆ ಸುಳ್ಳಹನೆ? |ಕರುಣೆ ನಿರ್ಬಂಧವೇಂ? - ಮಂಕುತಿಮ್ಮ ||
ಬಾಳ್ಕೆಯಲಿ ನೂರೆಂಟು ತೊಡಕು ತಿಣಕುಗಳುಂಟು |ಕೇಳ್ಕೆಮಾಣ್ಕೆಗಳಿಗವು ಜಗ್ಗವೊಂದಿನಿಸುಂ ||ಗೋಳ್ಕರೆದರೇನು ಫಲ ಗುದ್ದಾಡಲೇನು ಫಲ |ಪಲ್ಕಿರಿದು ತಾಳಿಕೊಳೊ - ಮಂಕುತಿಮ್ಮ ||
ಮೇರುಪರ್ವತಕಿಹುವು ನೂರೆಂಟು ಶಿಖರಗಳು |ದಾರಿ ನೂರಿರಬಹುದು; ನಿಲುವ ಕಡೆ ನೂರು ||ಸಾರು ನೀಂ ಯಾತ್ರಿಕರಿಗೆಲ್ಲ ಕೆಳೆಯಾಗಿರುತೆ |ಮೇರುಸಂಸ್ಕೃತಿಯೆ ಬಲ - ಮಂಕುತಿಮ್ಮ ||