ಒಟ್ಟು 11 ಕಡೆಗಳಲ್ಲಿ , 1 ವಚನಕಾರರು , 11 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಏನೊ ಕಣ್ಣನು ಪಿಡಿವುದೇನೊ ದಿಗಿಲಾಗಿಪುದು |ಏನನೋ ನೆನೆದು ಸರ್ರೆಂದು ಹಾರುವುದು ||ಬಾನೊಳಾಡುವ ಹಕ್ಕಿಗಿದುವೆ ನಿತ್ಯಾನುಭವ |ನೀನದನು ಮೀರಿಹೆಯ? - ಮಂಕುತಿಮ್ಮ ||
ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |ರನ್ನವೋ ಬ್ರಹ್ಮ; ನೋಡವನು---ನಿಜಪಿಂಛ ||ವರ್ಣದೆಣಿಕೆಯಲಿ ತನ್ನನೆ ಮರೆತ ನವಿಲವೊಲು |ತನ್ಮಯನೊ ಸೃಷ್ಟಿಯಲಿ - ಮಂಕುತಿಮ್ಮ ||
ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ |ಕೊರತೆಯೊಂದನು ನೀನು ನೆನೆನೆನೆದು ಕೆರಳಿ ||ಧರೆಯೆಲ್ಲವನು ಶಪಿಸಿ; ಮನದಿ ನರಕವ ನಿಲಿಸಿ |ನರಳುವುದು ಬದುಕೇನೊ? - ಮಂಕುತಿಮ್ಮ ||
ನೆನೆನೆನೆದು ಗಹನವನು; ಜೀವನರಹಸ್ಯವನು |ಮನವ ಬಳಲಿಸಿ ಸೋಲಿಸಿರುವ ತತ್ತ್ವವನು ||ಮನನದೇಕಾಂತದಲಿ ಮೌನದ ಧ್ಯಾನದಲಿ |ಮಣಿಮಣಿದು ಕೈಮುಗಿಯೊ - ಮಂಕುತಿಮ್ಮ ||
ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||ನಿತ್ಯಜೀವನದಿ ನೀನಾ ನಯವನನುಸರಿಸೊ |ಸ್ವತ್ವದಾಶೆಯ ನೀಗಿ - ಮಂಕುತಿಮ್ಮ ||
ಬರದಿಹುದರೆಣಿಕೆಯಲಿ ಬಂದಿಹುದ ಮರೆಯದಿರು |ಗುರುತಿಸೊಳಿತಿರುವುದನು ಕೇಡುಗಳ ನಡುವೆ ||ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು |ಹರುಷಕದೆ ದಾರಿಯೆಲೊ - ಮಂಕುತಿಮ್ಮ ||
ಬೆದಕಾಟ ಬದುಕೆಲ್ಲ; ಚಣಚಣವು ಹೊಸ ಹಸಿವು |ಅದಕಾಗಿ ಇದಕಾಗಿ ಮತ್ತೊಂದಕಾಗಿ ||ಅಧಿಕಾರ ಸಿರಿ ಸೊಗಸು ಕೀರ್ತಿಗಳ ನೆನೆದು ಮನ |ಕುದಿಯುತಿಹುದಾವಗಂ - ಮಂಕುತಿಮ್ಮ ||
ಮನೆಯ ಸಂಸಾರದಲಿ ವಾಸವಿರುತಾಗಾಗ |ನೆನೆದು ನೀಂ ದೇಗುಲಕೆ ಪೋಗಿಬರುವಂತೆ ||ದಿನವೆಲ್ಲ ದೇವಸನ್ನಿಧಿಯೊಳಿರುತಾಗಾಗ |ಮನೆಗೆ ಬರುವನವೊಲಿರು - ಮಂಕುತಿಮ್ಮ ||
ಸತ್ಯ ಶಿವ ಸುಂದರದ ಸಚ್ಚಿದಾನಂದನದ |ಭಿತ್ತಿಯಲಿ ಬಣ್ಣಬಣ್ಣದ ಜೀವಚಿತ್ರ ||ನಿತ್ಯ ನೀನದ ನೆನೆದು ಚಿತ್ರದಲಿ ಮನವಿರಿಸೆ |ವೃತ್ತಿ ತನ್ಮಯವಹುದೊ - ಮಂಕುತಿಮ್ಮ ||
ಸ್ವಾರಸ್ಯವಮಿತಮಾರಿಗುಮಿರದು ಜೀವನದಿ |ಪಾರದಿರ್ಕೆಯ ನೆನೆದು ನಡೆಯಲದು ಸಫಲ ||ಸಾರಂಗಳ್ ಎಲ್ಲ ಪಣ್ಗಳವುಮ್ ಒಂದರೊಳಿರವು |ಆರೋಗಿಸಿರುವುದನು - ಮಂಕುತಿಮ್ಮ ||
ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ |ಸಾಗಿ ಮುಗಿವುದು; ಮುಗಿದು ಮರೆವುದದೆ ಸುಕೃತ ||ಈಗಲೋ ಆಗಲೋ ಎಂದೊ ಮುಗಿವುಂಟೆಂಬ |ಭಾಗ್ಯವನು ನೆನೆದು ನಲಿ - ಮಂಕುತಿಮ್ಮ ||