ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವ ನೆಲದಲಿ ಮೇದೊ; ಆವ ನೀರನು ಕುಡಿದೊ |ಆವು ಹಾಲ್ಗರೆವುದದನಾರು ಕುಡಿಯುವನೋ! ||ಆವ ಬಲವದರಿನೊಗೆದೇಂಗೆಯ್ಸುವುದೊ ಜಗಕೆ! |ಭಾವಿಸಾ ಋಣಗತಿಯ - ಮಂಕುತಿಮ್ಮ ||
ಜನಿಸಿದೆಡೆಯಿಂ ಕಡಲವರೆಗಮಡಿಯಡಿ ನೆಲದ |ಗುಣವ ಕೊಳ್ಳುತ ಕೊಡುತ ಪೊನಲು ಮಾರ್ಪಡುಗುಂ ||ಮನುಜಸಂತಾನದಲಿ ಗುಣದವತರಣವಂತು |ಗುಣಿಪುದೆಂತಾ ತೆರನ - ಮಂಕುತಿಮ್ಮ ||
ನೆಲದ ಬೇಸಾಯ ತಾನೊಳ್ಳಿತಾಗಿರೆ ನಿನಗೆ |ಫಲವದೆಂತಹುದೆಂಬ ಶಂಕೆಗೆಡೆಯುಂಟೆ? ||ಒಳಿತರೊಳೆ ನೀಂ ಬಾಳು; ಪರವದೆಂತಿರ್ಡೊಡೇಂ? |ಇಳೆಯೆ ಬಾಗಿಲು ಪರಕೆ - ಮಂಕುತಿಮ್ಮ ||
ಬಳಲಿ ನೆಲದಲಿ ಮಲಗಿ ಮೈಮರೆತು ನಿದ್ರಿಪನ |ಕುಲುಕಿ ಹಾಸಿಗೆಯನರಸೆನುವುದುಪಕೃತಿಯೆ? ||ಒಳಿತನೆಸಗುವೆನೆಂದು ನೆಮ್ಮದಿಯ ನುಂಗದಿರು |ಸುಲಭವಲ್ಲೊಳಿತೆಸಗೆ - ಮಂಕುತಿಮ್ಮ ||