ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವುದೋ ಒಳಿತೆಂದು ಆವುದೋ ಸೊಗವೆಂದು |ಆವಾವ ದಿಕ್ಕಿನೊಳಮಾವಗಂ ಬೆದಕಿ ||ಜೀವ ಪರಿಧಾವಿಪವೊಲ್ ಆಗಿಪಂತರ್ವೃತ್ತಿ |ಭಾವುಕದ ನೆಲೆಯ ಕರೆ - ಮಂಕುತಿಮ್ಮ ||
ತಲೆಯೊಳಗೆ ನೆರೆದಿಹುವು ನೂರಾರು ಹಕ್ಕಿಗಳು |ಗಿಳಿ ಗೂಗೆ ಕಾಗೆ ಕೋಗಿಲೆ ಹದ್ದು ನವಿಲು ||ಕಿಲಕಿಲನೆ ಗೊರಗೊರನೆ ಕಿರಿಚಿ ಕೂಗುತ್ತಿಹುವು |ನೆಲೆಯೆಲ್ಲಿ ನಿದ್ದೆಗೆಲೊ? - ಮಂಕುತಿಮ್ಮ ||
ಮನೆಯೆಲ್ಲಿ ಸತ್ಯಕ್ಕೆ? ಶ್ರುತಿ ತರ್ಕಮಾತ್ರದೊಳೆ? |ಅನುಭವಮುಮದರೊಂದು ನೆಲೆಯಾಗದಿಹುದೇಂ? ||ಮನು{ಜ}ಹೃದಯಾಂಗಣದೊಳೆನಿತೆನಿತೊ ದನಿಯುದಿಸಿ |ಅಣಕಿಪುವು ತರ್ಕವನು - ಮಂಕುತಿಮ್ಮ ||