ಒಟ್ಟು 14 ಕಡೆಗಳಲ್ಲಿ , 1 ವಚನಕಾರರು , 13 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವ ಋಣಕೋಸುಗವೊ; ಆರ ಹಿತಕೋಸುಗವೊ |ಆವಾವ ಕಾರಣಕೊ; ಆವ ಯೋಜನೆಗೋ ||ನೋವ ನೀಂ ಪಡುವುದೇ ದೈವೇಚ್ಛೆಯಾಗಿರದೆ? |ದೈವ ಕುರುಡೆನ್ನದಿರು - ಮಂಕುತಿಮ್ಮ ||
ಆವ ಜೀವದ ಪಾಕವಾವನುಭವದಿನಹುದೊ! |ಆವ ಪಾಪಕ್ಷಯವದಾವ ಪುಣ್ಯದಿನೋ! ||ಕಾವಿರದೆ ಪಕ್ವವಹ ಜೀವವಿಳೆಯೊಳಗಿರದು |ನೋವೆಲ್ಲ ಪಾವಕವೊ - ಮಂಕುತಿಮ್ಮ ||
ಏನೇನು ಹಾರಾಟ ಸುಖಕೆಂದು ಲೋಕದಲಿ |ತಾನಾಗಿ ಗಾಳಿವೊಲ್ ಬಂದ ಸುಖವೆ ಸುಖ ||ನೀನೆ ಕೈ ಬೀಸಿಕೊಳೆ ನೋವು ಬೆವರುಗಳೆ ಫಲ |ಮಾಣು ಮನದುಬ್ಬಸವ - ಮಂಕುತಿಮ್ಮ ||
ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ? |ಓಲೆಗಳನವರವರಿಗೈದಿಸಿರೆ ಸಾಕು ||ಸಾಲಗಳೊ; ಶೂಲಗಳೊ; ನೋವುಗಳೊ; ನಗುವುಗಳೊ! |ಕಾಲೋಟವವನೂಟ - ಮಂಕುತಿಮ್ಮ ||
ಚೆಲುವುನಗುವುಗಳ ಕಂಡವನ ಕಣ್ಣರಳುವುದು |ಅಳುವುನೋವುಗಳ ಕಂಡೊದ್ದೆಯಾಗುವುದು ||ಇಳೆಯ ದನಿಗವನೆದೆಯೊಳೊಪ್ಪು ಮರುದನಿಯಹುದು |ಶಿಲೆಯಲ್ಲ ಯೋಗಿಯೆದೆ - ಮಂಕುತಿಮ್ಮ ||
ನಗು; ಮನದಿ ಲೋಗರ ವಿಕಾರಂಗಳನು ನೋಡಿ |ಬಿಗಿ ತುಟಿಯ; ದುಡಿವಂದು ನೋವಪಡುವಂದು ||ಪೊಗು; ವಿಶ್ವಜೀವನದ ಜೀವಾಂತರಂಗದಲಿ |ನಗುನಗುತ ಬಾಳ್; ತೆರಳು - ಮಂಕುತಿಮ್ಮ ||
ಮಿಡಿಚೇಪೆಕಾಯಿಗಳ ತಡಬಡದೆ ನುಂಗುವುದು |ಕಡಿಮೆ ಹೊಟ್ಟೆಯಲಿ ಹರಳೆಣ್ಣೆ ಕುಡಿಯುವುದು ||ಬಿಡುತಿರಲು ನೋವಾಗ ಸುಖವೀಗಳೆನ್ನುವುದು |ಪೊಡವಿಗಿದೆ ಭೋಗವಿಧಿ - ಮಂಕುತಿಮ್ಮ ||
ರಾವಣನ ಹಳಿವವನೆ; ಜೀವವನೆ ಬಿಸುಡಿಸುವ |ಲಾವಣ್ಯವೆಂತಹುದೊ? ನೋವದೆಂತಹುದೊ? ||ಬೇವಸವ ಪಟ್ಟು ತಿಳಿ; ತಿಳಿದು ಹಳಿಯುವೊಡೆ ಹಳಿ |ಗಾವಿಲನ ಗಳಹೇನು? - ಮಂಕುತಿಮ್ಮ ||
ವಹಿಸು ಕೆಲ ಭಾರಗಳ; ಸಹಿಸು ಕೆಲ ನೋವುಗಳ |ಪ್ರಹರಿಸರಿಗಳನನಿತು ಯುಕ್ತಗಳನರಿತು ||ಮಹಿಯ ನಾಟಕದಿ ನೀಂ ಮನಸಿಟ್ಟು ಕುಣಿಕುಣಿದು |ವಿಹರಿಸಾತ್ಮಾಲಯದಿ - ಮಂಕುತಿಮ್ಮ ||
ವೈವಿಧ್ಯವೊಂದು ಕೃಪೆ ನಮಗಿರುವ ಕಷ್ಟದಲಿ |ಆವರಿಸದಳಲ್ ಎಲ್ಲರನುಮೊಂದೆ ಸಮಯ ||ನೋವಿಲ್ಲದರು ನೊಂದವರನು ಸಂತಯಿಸುತಿರೆ |ಜೀವನವು ಕಡಿದಹುದೆ? - ಮಂಕುತಿಮ್ಮ ||
ಸಾಸಿರದ ಯುಕ್ತಿ ಸಾಹಸದ ನೀನೆಸಗುತಿರು |ಲೇಸು ಫಲ ದೊರೆಗೆ ನಿನ್ನೆಲ್ಲ ಪೌರುಷಕಂ ||ಶೇಷ ನಿನಗುಳಿವುದೆಂತಾದೊಡಂ ನೋವಿನಿತು |ಸೈಸದನು ನೀನಳದೆ - ಮಂಕುತಿಮ್ಮ ||
ಸೊಟ್ಟುಗಳ ನೆಟ್ಟಗಾಗಿಪ ಯತ್ನ ಲೋಕದಲಿ |ಸೃಷ್ಟಿಯಾದಿಯಿನಾಗುತಿಹುದು; ಫಲವೇನು? ||ಹೊಟ್ಟೆ ನೋವಿಳಿಯುತಿರೆ ರಟ್ಟೆ ನೋವೆನ್ನುವುದು |ಮಟ್ಟಸವೆ ತಿರೆಹರವು? - ಮಂಕುತಿಮ್ಮ ||
ಹೂವ ತಳೆದ ಗುಲಾಬಿಯಿಂದ ಮನಕಹುದೇನು? |ನೋವೊ? ಸಂತಸವೊ? ನೋಡಾಮುಳ್ಳು ಬಾಳ್ಗೆ ||ಹೂವೆ ದಿವ್ಯಕಿರೀಟವದುವೆ ಕಾಲಕಟಾಕ್ಷ |ಜೀವನದ ತಿರುಳಷ್ಟೆ - ಮಂಕುತಿಮ್ಮ ||