ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅವತರಿಸಿಹನು ಬೊಮ್ಮ ವಿಶ್ವದೇಹದೊಳೆನ್ನೆ |ಅವನ ವೇಷಗಳೇಕೆ ಮಾರ್ಪಡುತಲಿಹವು? ||ತವಕಪಡನೇತಕೋ ಕುರುಹ ತೋರಲು ನಮಗೆ |ಅವಿತುಕೊಂಡಿಹುದೇಕೊ? - ಮಂಕುತಿಮ್ಮ ||
ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳೆಸುವೀ |ಸೃಷ್ಟಿಯಲಿ ತತ್ತ್ವವೆಲ್ಲಿಯೊ ಬೆದಕಿ ನರನು ||ಕಷ್ಟಪಡುತಿರಲೆನುವುದೇ ಬ್ರಹ್ಮವಿಧಿಯೇನೊ! |ಅಷ್ಟೆ ನಮ್ಮಯ ಪಾಡು? - ಮಂಕುತಿಮ್ಮ ||
ಏಸು ಸಲ ತಪವಗೈದೇಸು ಬನ್ನವನಾಂತು |ಕೌಶಿಕಂ ಬ್ರಹ್ಮರ್ಷಿಪದಕರ್ಹನಾದನ್? ||ಘಾಸಿಪಡುತಿನ್ನೊಮ್ಮೆ ಮತ್ತೊಮ್ಮೆ ಮರಮರಳಿ |ಲೇಸಾಗಿಸಾತ್ಮವನು - ಮಂಕುತಿಮ್ಮ ||
ಒಮ್ಮನಸಿನಿಂದ ನೀನೀ ತತ್ತ್ವವಂ ಗ್ರಹಿಸು |ಬ್ರಹ್ಮಲೀಲೆಗೆ ಗೊತ್ತುಗುರಿ ಲೆಕ್ಕವಿಲ್ಲ ||ಸುಮ್ಮನಿರು ನಿನ್ನ ಪಾಡನು ಪಡುತ ತುಟಿ ಬಿಗಿದು |ನೆಮ್ಮದಿಗೆ ದಾರಿಯದು - ಮಂಕುತಿಮ್ಮ ||