ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? |ಅರೆಬೆಳಕು ಧರೆಯೊಳೆಂದೊರಲಿ ಸುಖವೇನು? ||ಇರುವ ಕಣ್ಣಿರುವ ಬೆಳಕಿನೊಳಾದನಿತ ನೋಡಿ |ಪರಿಕಿಸಿದೊಡದು ಲಾಭ - ಮಂಕುತಿಮ್ಮ ||
ಆಟಕ್ಕೆ ಫಲವೇನು? ಕೌತುಕದ ರುಚಿಯೆ ಫಲ |ಚೀಟಿ ತಾಂ ಬೀಳೆನೆನಲ್ ಆಟ ಸಾಗುವುದೆ? ||ಏಟಾಯ್ತೆ ಗೆಲುವಾಯ್ತೆಯೆಂದು ಕೇಳುವುದೇನು? |ಆಟದೋಟವೆ ಲಾಭ - ಮಂಕುತಿಮ್ಮ ||
ಧರೆಯ ಬದುಕೇನದರ ಗುರಿಯೇನು ಫಲವೇನು? |ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ ||ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ |ನರನು ಸಾಧಿಪುದೇನು? - ಮಂಕುತಿಮ್ಮ ||
ಪರದ ಮೇಲ್ಕಣ್ಣಿಟ್ಟು ಧರೆಯ ತುಚ್ಛವೆನುತ್ತ |ತೊರೆದಾಯಸಂಗೊಳ್ಳೆ ದೊರೆವ ಫಲವೇನು? ||ಸುರಧನುವಿಗೇಣಿಯಿಡಹೊರಟು ನಿನ್ನಂಗಳದ |ಕಿರಿಹೂವ ಮರೆಯುವೆಯ - ಮಂಕುತಿಮ್ಮ ||
ಸೊಟ್ಟುಗಳ ನೆಟ್ಟಗಾಗಿಪ ಯತ್ನ ಲೋಕದಲಿ |ಸೃಷ್ಟಿಯಾದಿಯಿನಾಗುತಿಹುದು; ಫಲವೇನು? ||ಹೊಟ್ಟೆ ನೋವಿಳಿಯುತಿರೆ ರಟ್ಟೆ ನೋವೆನ್ನುವುದು |ಮಟ್ಟಸವೆ ತಿರೆಹರವು? - ಮಂಕುತಿಮ್ಮ ||