ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು? |ಬಗೆದು ಬಿಡಿಸುವರಾರು ಸೋಜಿಗವನಿದನು? ||ಜಗವ ನಿರವಿಸಿದ ಕೈಯೊಂದಾದೊಡೇಕಿಂತು |ಬಗೆಬಗೆಯ ಜೀವಗತಿ? - ಮಂಕುತಿಮ್ಮ ||
ತನ್ನ ಮನದಾಟಗಳ ತಾನೆ ನೋಡುತ ನಗುವ |ತನ್ನೊಳಗೆ ತಾನಿರ್ವರಾದವೊಲು ಬಾಳ್ವ ||ಚಿನ್ಮಾತ್ರವನು ಬೇರೆ ಬಗೆದು ಜಾನಿಪ ಚತುರ |ಧನ್ಯತೆಯ ಕಂಡವನು - ಮಂಕುತಿಮ್ಮ ||
ತನ್ನ ಶಕ್ತಿಯನಳೆದು; ತನ್ನ ಗುಣಗಳ ಬಗೆದು |ಸನ್ನಿವೇಶದ ಸೂಕ್ಷ್ಮವರಿತು; ಧೃತಿದಳೆದು ||ತನ್ನ ಕರ್ತವ್ಯಪರಿಧಿಯ ಮೀರದುಜ್ಜುಗಿಸೆ |ಪುಣ್ಯಶಾಲಿಯ ಪಾಡು - ಮಂಕುತಿಮ್ಮ ||
ದಂಡನಿರ್ಣಯದಿ ನೀಂ ಕ್ಷಮಿಸೆನಲ್ ನ್ಯಾಯಪತಿ |ಹಿಂದಿನಾ ನಿನ್ನೊಳ್ತನವನ್ ಅಂದಿನಳಲನ್ ||ತಂದೆಬಗೆಯಿಂ ಬಗೆದು ಶಾಸನೋಗ್ರವನಿನಿತು |ಕುಂದಿಸಲಿಕಾಗದೇಂ? - ಮಂಕುತಿಮ್ಮ ||
ವಿಶದಮಾದೊಂದು ಜೀವನಧರ್ಮದರ್ಶನವ- |ನುಸುರಿಕೊಳೆ ತನ್ನ ಮನಸಿಗೆ ತಾನೆ ಬಗೆದು ||ನಿಸದವಂ ಗ್ರಂಥಾನುಭವಗಳಿಂದಾರಿಸುತ |ಹೊಸೆದನೀ ಕಗ್ಗವನ - ಮಂಕುತಿಮ್ಮ ||