ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಣ್ಯಕದ ಪುಷ್ಪಗಳ ಮೂಸುವವರಾರು? |ಆರಿಹರು ಪತಗದುಡುಪನು ಹುಡುಕಿ ಮೆಚ್ಚಲ್? ||ಬೇರೊಬ್ಬರೆಣಿಕೆಯಿಲ್ಲದೆ ಪ್ರಕೃತಿ ತನಗೆಂದೆ |ಸ್ವಾರಸ್ಯವೆಸಗುವಳೊ! - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಒಣಗಿ ಬೇಸಗೆಯಿಂದ ಮಣ್ಣಾಗಿ ಕಾಣದಿಹ |ತೃಣ ಮೊಳೆಯುವುದು ಮರಳಿ ಹನಿಯೆರಡು ಬೀಳೆ ||ಅಣಗಿರ್ದು ನರನಾಶೆಯಂತು ಕಷ್ಟದ ದಿನದಿ |ಕುಣಿವುದನುಕೂಲ ಬರೆ - ಮಂಕುತಿಮ್ಮ ||

ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ? |ಓಲೆಗಳನವರವರಿಗೈದಿಸಿರೆ ಸಾಕು ||ಸಾಲಗಳೊ; ಶೂಲಗಳೊ; ನೋವುಗಳೊ; ನಗುವುಗಳೊ! |ಕಾಲೋಟವವನೂಟ - ಮಂಕುತಿಮ್ಮ ||

ಕಡಲ ಕಡೆದರು ಸುರಾಸುರರು ನಿಜಬಲದಿಂದ |ಕುಡಿದನದನು ತಪಸ್ಸಿನಿಂದ ಕುಂಭಜನು ||ಕಡಮೆಜನ ಪಾರಗಾಂಬರೆ ಗಾಸಿಯನು ಪಡದೆ? |ಪೊಡವಿ ಬಾಳ್ವೆಯುಮಂತು - ಮಂಕುತಿಮ್ಮ ||

ಬರೆವ ಹಲಗೆಯನೊಡೆದು ಬಾಲಕನು ತಾನದನು |ಮರಳಿ ಜೋಡಿಪೆನೆನ್ನುತಾಯಾಸಗೊಳುತ ||ಸರಿಚೌಕಗೈವಾಟದಲಿ ಜಗವ ಮರೆವಂತೆ |ಪರಬೊಮ್ಮ ಸೃಷ್ಟಿಯಲಿ - ಮಂಕುತಿಮ್ಮ ||

ರಾಮನಡಿಯಿಟ್ಟ ನೆಲ; ಭೀಮನುಸಿರಿದ ಗಾಳಿ |ವ್ಯೋಮದೆ ಭಗೀರಥಂ ತಂದ ಸುರತಟಿನಿ |ಸೋಮನಂ ಪೆತ್ತ ಕಡಲೀ ಪುರಾತನಗಳಿರೆ |ನಾಮೆಂತು ಹೊಸಬರೆಲೊ - ಮಂಕುತಿಮ್ಮ ||

ಲೋಕವೆಲ್ಲವು ದೈವಲೀಲೆಯೆಂಬರೆ; ಪೇಳಿ |ಶೋಕ ಸೋಂಕಿರದೊಡಾ ಲೀಲೆ ನೀರಸವೇಂ? ||ಮೂಕಂಗೆ ಕಳ್ ಕುಡಿಸಿ ಚೇಳ್ ಕುಟಕಿಪಾಟವಿದು |ಏಕಪಕ್ಷದ ಲೀಲೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ