ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಿಡಿ ಸಣ್ಣದನು ಮೇಲೆ ಬಿದ್ದ ಕೊರಡಾರಿಪುದು |ಸುಡುವುದಾ ಕಿಡಿಯುರಿಯೆ ನೂರು ಕೊರಡುಗಳ ||ಉಡುಗಿ ನಿನ್ನಾತ್ಮವಿರೆ ಬಿಡು ಹೆಗ್ಗೆಲಸಗಳನು |ತೊಡಗಾತ್ಮ ಬಲಿತಂದು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ದೇವಾಂಶ ಪಶ್ವಂಶಗಳ ಗಂಟು ಮಾನುಷತೆ |ಧೀವಿಮರ್ಶೆಯಿನೊಂದ ಸತ್ಕರಿಸಿ ಬಲಿಸಿ ||ಭಾವಪರಿಶೋಧನೆಯಿನಿನ್ನೊಂದ ದಂಡಿಪುದೆ |ಜೀವಪ್ರಕರ್ಷಗತಿ - ಮಂಕುತಿಮ್ಮ ||

ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ |ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ||ದಿನವ ಕಳೆ; ಗುರುಶಿಷ್ಯಪಟ್ಟಗಳು ನಿನಗೇಕೆ? |ನಿನಗೆ ನೀನೇ ಗುರುವೊ - ಮಂಕುತಿಮ್ಮ ||

ಪಾತಕಿಯೊಳಾಗ್ರಹವ ತೋರೆ ನಿರ್ಮಲನಾರು? |ಆತುಮದ ಪರಿಕಥೆಯನರಿತವರೆ ನಾವು? ||ಸೋತ ದುರ್ಬಲಿಗೆ ಸಲ್ಲುವುದು ನಮ್ಮನುಕಂಪೆ |ನೀತಿ ನಿಂದೆಯೊಳಿರದು - ಮಂಕುತಿಮ್ಮ ||

ಪ್ರೇಮ ಕನಲೆ ಪಿಶಾಚಿ; ತೃಪ್ತಿಯಾಂತಿರೆ ಲಕ್ಷ್ಮಿ |ಭ್ರಾಮಿಪುದದು ಪ್ರತಿಪ್ರೇಮಯಾಚನೆಯೊಳ್ ||ಮಾಮಕವಿದೆಂದಾವುದಕೊ ತಾನೆ ಬಲಿವೋಗಿ |ಶಾಮನವನೊಂದುವುದು - ಮಂಕುತಿಮ್ಮ ||

ಬಂಧುಬಳಗವುಮಂತಕನ ಚಮುವೊ; ಛದ್ಮಚಮು |ದಂದುಗದ ಬಾಗಿನಗಳವರ ನಲುಮೆಗಳು ||ಕುಂದಿಪ್ಪುವಾತ್ಮನನವರ್ಗಳುಪಕಾರಗಳು |ಮಂದಿಗಾಗದಿರು ಬಲಿ - ಮಂಕುತಿಮ್ಮ ||

ಮೌನದಿಂದಂಬಲಿಯನುಂಡು ತಣಿಯುವ ಮಾನಿ |ಶ್ವಾನನುಣುವೆಂಜಲೋಗರಕೆ ಕರುಬುವನೆ? ||ಜ್ಞಾನಿ ನಡೆವಂ ವಿಷಯ ತರತಮವಿವೇಕದಲಿ |ಮಾಣು ನೀಂ ತಲ್ಲಣವ - ಮಂಕುತಿಮ್ಮ ||

ಸರಿಗೆಪಂಚೆಯೊ ಹೊದಕೆ; ಹರಕುಚಿಂದಿಯೊ ಮೈಗೆ |ಪರಮಾನ್ನಭೋಜನವೊ; ತಿರುಪೆಯಂಬಲಿಯೋ ||ಪರಿಣಾಮದಲಿ ಧನಿಕ ಬಡವರಿರ್ವರುಮೊಂದೆ |ಕರುಬು ಕೊರಗೇತಕೆಲೊ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ