ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಗಾಳಿ ಮಣ್ಣುಂಡೆಯೊಳಹೊಕ್ಕು ಹೊರಹೊರಳಲದು |ಆಳೆನಿಪುದಂತಾಗದಿರೆ ಬರಿಯ ಹೆಂಟೆ ||ಬಾಳೇನು ಧೂಳು ಸುಳಿ; ಮರ ತಿಕ್ಕಿದುರಿಯ ಹೊಗೆ |ಕ್ಷ್ವೇಳವೇನಮೃತವೇಂ? - ಮಂಕುತಿಮ್ಮ ||
ಮನೆಯ ಮಾಳಿಗೆಗಲ್ಲ; ಮುಡಿಯ ಕೊಪ್ಪಿಗೆಗಲ್ಲ |ಇನಿವಣ್ಣು ತನಿಯ ಕಾಳೆಂಬುದೇನಿಲ್ಲ ||ಬಣಗು ಕುರಿಚಲು ಗಿಡದ ಬಾಳೇನು? ನೀನಂತು |ಒಣಗಿದೊಡೆ ಸವುದೆ ಸರಿ - ಮಂಕುತಿಮ್ಮ ||
ಸುತ್ತಿ ಸುತ್ತುವ ಖಗವ ಗೂಡ ನೆನಪೆಳೆಯುವುದು |ಗೊತ್ತುನೂಲ್ ಪಿಡಿದಿಹುದು ದನವ ಬಯಲಿನಲಿ ||ತತ್ತ್ವವೊಂದರ ಹಿಡಿತಕೊಗ್ಗದಿಹ ಬಾಳೇನು? |ಕಿತ್ತ ಗಾಳಿಯ ಪಟವೊ - ಮಂಕುತಿಮ್ಮ ||