ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಣು ಭೂತ ಭೂಗೋಲ ತಾರಾಂಬರಾದಿಗಳ |ನಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ ||ಕುಣಿಸುತಿರುವನು ತನ್ನ ಕೃತಿಕಂತುಕವನದರೊ |ಳಣಗಿರ್ದು ಪರಬೊಮ್ಮ - ಮಂಕುತಿಮ್ಮ ||
ಋಣದ ಮೂಟೆಯ ಹೊರಿಸಿ; ಪೂರ್ವಾರ್ಜಿತದ ಹುರಿಯ |ಕುಣಿಕೆಯಲಿ ನಿನ್ನ ಕೊರಳನು ಬಿಗಿದು ವಿಧಿಯು ||ತೃಣದ ಕಡ್ಡಿಯ ಮುಂದೆ ಹಿಡಿದಾಶೆ ತೋರುತಿರೆ |ಕುಣಿವ ಗರ್ದಭ ನೀನು - ಮಂಕುತಿಮ್ಮ ||
ಒಮ್ಮನಸಿನಿಂದ ನೀನೀ ತತ್ತ್ವವಂ ಗ್ರಹಿಸು |ಬ್ರಹ್ಮಲೀಲೆಗೆ ಗೊತ್ತುಗುರಿ ಲೆಕ್ಕವಿಲ್ಲ ||ಸುಮ್ಮನಿರು ನಿನ್ನ ಪಾಡನು ಪಡುತ ತುಟಿ ಬಿಗಿದು |ನೆಮ್ಮದಿಗೆ ದಾರಿಯದು - ಮಂಕುತಿಮ್ಮ ||
ಕದಕಗಳಿಯನು ಬಿಗಿದು ಬೊಮ್ಮ ಗುಡಿಯೊಳಗಿರಲಿ |ಅದರ ಕೀಲ್ಕುಂಚಿಕೆಯ ಹೊರಕೆಸೆಯೆ ಸಾಕು ||ಪದವಾಕ್ಯವಿದರಾಗ ವಾದಗಡಣೆಯ ಬಿಟ್ಟು |ಒದವಿಪರು ದಿಟದರಿವ - ಮಂಕುತಿಮ್ಮ ||
ತನ್ನ ಶಿಲುಬೆಯ ತಾನೆ ಹೊತ್ತನಲ ಗುರು ಯೇಸು? |ನಿನ್ನ ಕರ್ಮದ ಹೊರೆಯ ಬಿಡದೆ ನೀನೆ ಹೊರು ||ಖಿನ್ನನಾಗದೆ ತುಟಿಯ ಬಿಗಿದು ಶವಭಾರವನು |ಬೆನ್ನಿನಲಿ ಹೊತ್ತು ನಡೆ - ಮಂಕುತಿಮ್ಮ ||
ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ |ನ್ನೊಳಗಿನಸುವೆಲ್ಲವನು ಕಟ್ಟಿನಿಂ ಬಿಗಿದು ||ಎಳೆದಾಟವೇಂ ಋಣಾಕರ್ಷಣೆಯೊ? ಸೃಷ್ಟಿವಿಧಿ |ಯೊಳತಂತ್ರವೋ? ನೋಡು - ಮಂಕುತಿಮ್ಮ ||