ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕದಕಗಳಿಯನು ಬಿಗಿದು ಬೊಮ್ಮ ಗುಡಿಯೊಳಗಿರಲಿ |ಅದರ ಕೀಲ್ಕುಂಚಿಕೆಯ ಹೊರಕೆಸೆಯೆ ಸಾಕು ||ಪದವಾಕ್ಯವಿದರಾಗ ವಾದಗಡಣೆಯ ಬಿಟ್ಟು |ಒದವಿಪರು ದಿಟದರಿವ - ಮಂಕುತಿಮ್ಮ ||
ಕೆಟ್ಟ ಪ್ರಪಂಚವಿದು; ಸುಟ್ಟ ಕರಿ ನರಮನಸು |ಬಿಟ್ಟುಬಿಡಲರಿದದನು; ಕಟ್ಟಿಕೊಳೆ ಮಷ್ಟು ||ಮುಟ್ಟಿ ಮುಟ್ಟದವೋಲುಪಾಯದಿಂ ನೋಡದನು |ಗಟ್ಟಿ ಪುರುಳೇನಲ್ಲ - ಮಂಕುತಿಮ್ಮ ||
ಧರ್ಮಸಂಕಟದಿ ಮನ ತಲ್ಲಣಿಸುತಿರುವಂದು |ನಿರ್ಮಥಿಸು ನಿನ್ನಾತ್ಮವನೆ ಮಮತೆ ಬಿಟ್ಟು ||ನಿರ್ಮಮದ ಸದ್ವಿವೇಕದ ದೀಪಕಿಂತ ನೀಂ |ನೆಮ್ಮಲಿನ್ನೇನಿಹುದೊ? - ಮಂಕುತಿಮ್ಮ ||
ವ್ಯಾಮೋಹವಿಲ್ಲದ ಪ್ರೇಮ ನಿರ್ಭರವಿರಲಿ |ಭೀಮಸಾಹಸವಿರಲಿ ಹಗೆತನವನುಳಿದು ||ನೇಮನಿಷ್ಠೆಗಳಿರಲಿ ಡಂಭಕಠಿಣತೆ ಬಿಟ್ಟು |ಸೌಮ್ಯವೆಲ್ಲೆಡೆಯಿರಲಿ - ಮಂಕುತಿಮ್ಮ ||
ಹೃದ್ಯ ಹೃದಯೇಂಗಿತಕೆ ರಾಗ ತಾಳದ ಕಟ್ಟು |ಗದ್ಯ ಲೌಕಿಕ ತಾತ್ತ್ವಿಕಕ್ಕಚ್ಚುಕಟ್ಟು ||ಮಧ್ಯದಲಿ ಮಿಸುಕಿ; ನೆಲಬಿಟ್ಟು ಬಾನ್ ಮುಟ್ಟದಿಹ |ಪದ್ಯವಧಿಕಪ್ರಸಂಗಿ - ಮಂಕುತಿಮ್ಮ ||