ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆಹ! ಈ ಮೋಹಗಳೊ ನೇಹಗಳೊ ದಾಹಗಳೊ |ಊಹಿಪೆಯ ಸೃಷ್ಟಿಯಲಿ ಹೃದಯವಿಹುದೆಂದು? ||ಹೋಹೊ ಹಾಹಾ ಎಂದು ನಮ್ಮ ಬಾಯ್ಬಿಡಿಸುವುದೆ |ಈ ಹರಿಬದೊಳಗುಟ್ಟೊ? - ಮಂಕುತಿಮ್ಮ ||
ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |ಆವನಾ ಬಂಧುತೆಯ ಜಡೆಯ ಬಿಡಿಸುವನು? ||ಜೀವ ಜೀವಕೆ ನಂಟು ಜಡ ಚೇತನಕೆ ನಂಟು |ಆವುದದಕಂಟಿರದು? - ಮಂಕುತಿಮ್ಮ ||
ಎಡರು ತೊಡರೆನಲೇಕೆ? ಬಿಡಿಸು ಮತಿಗಾದನಿತ |ದುಡಿ ಕೈಯಿನಾದನಿತು; ಪಡು ಬಂದ ಪಾಡು ||ಬಿಡು ಮಿಕ್ಕುದನು ವಿಧಿಗೆ; ಬಿಡದಿರುಪಶಾಂತಿಯನು |ಬಿಡುಗಡೆಗೆ ದಾರಿಯದು - ಮಂಕುತಿಮ್ಮ ||
ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು? |ಬಗೆದು ಬಿಡಿಸುವರಾರು ಸೋಜಿಗವನಿದನು? ||ಜಗವ ನಿರವಿಸಿದ ಕೈಯೊಂದಾದೊಡೇಕಿಂತು |ಬಗೆಬಗೆಯ ಜೀವಗತಿ? - ಮಂಕುತಿಮ್ಮ ||
ಧನ್ಯ ಹೊಲೆಯರ ನಂದ; ಹಿಡಿದುದವನನು ಕನಸು |ಸ್ವರ್ಣಸಭೆಯಾ ಶೈವತಾಂಡವದ ಕನಸು ||ಅನ್ಯಚಿಂತೆಗಳನದು ಬಿಡಿಸುತವನಾತ್ಮವನು |ಚಿನ್ಮಯಕೆ ಸೇರಿಸಿತು - ಮಂಕುತಿಮ್ಮ ||