ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕತ್ತಲೆಯೊಳೇನನೋ ಕಂಡು ಬೆದರಿದ ನಾಯಿ |ಎತ್ತಲೋ ಸಖನೊರ್ವನಿಹನೆಂದು ನಂಬಿ ||ಕತ್ತೆತ್ತಿ ಮೋಳಿಡುತ ಬೊಗಳಿ ಹಾರಾಡುವುದು |ಭಕ್ತಿಯಂತೆಯೆ ನಮದು - ಮಂಕುತಿಮ್ಮ ||
ವಿಧಿಯ ಹೊರೆಗಳನು ತಪ್ಪಿಸಿಕೊಳುವನೆಲ್ಲಿಹನು? |ಬೆದರಿಕೆಯನದರಿಂದ ನೀಗಿಪನು ಸಖನು ||ಎದೆಯನುಕ್ಕಾಗಿಸಾನಿಸು ಬೆನ್ನ; ತುಟಿಯ ಬಿಗಿ |ವಿಧಿಯಗಸ; ನೀಂ ಕತ್ತೆ - ಮಂಕುತಿಮ್ಮ ||
ಹುರಿಯುರುಳೆ ಹಾವಲ್ಲವಾದೊಡಂ ಮಬ್ಬಿನಲಿ |ಹರಿದಾಡಿದಂತಾಗೆ ನೋಳ್ಪವಂ ಬೆದರಿ ||ಸುರಿಸುವಾ ಬೆವರು ದಿಟ; ಜಗುವುಮಂತುಟೆ ದಿಟವು |ಜರೆಯದಿರು ತೋರ್ಕೆಗಳ - ಮಂಕುತಿಮ್ಮ ||