ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ತರುಜಾತಿ ಖಗಜಾತಿ ಮೃಗಜಾತಿಗಳು ನೂರು |ನರಜಾತಿ ಮಿಕ್ಕ ಜಾತಿಗಳಿಂದ ಬೇರೆ ||ನರರೊಳೋರೊರ್ವನುಂ ತಾನೊಂದು ಬೇರೆ ಜಗ |ಬೆರಕೆ ಸಾಮ್ಯಾಸಾಮ್ಯ - ಮಂಕುತಿಮ್ಮ ||
ನರವಿವೇಕವದೇನು ಬರಿಯ ಮಳೆನೀರಲ್ಲ |ಕೆರೆಯ ನೀರ್ ಊರ ಮೈಸೋಂಕುಗಳ ಬೆರಕೆ ||ಧರೆಯ ರಸವಾಸನೆಗಳಾಗಸದ ನಿರ್ಮಲದ |ವರವ ಕದಡಾಗಿಪುವು - ಮಂಕುತಿಮ್ಮ ||
ಪುಲಿ ಸಿಂಗದುಚ್ಛ್ವಾಸ; ಹಸು ಹುಲ್ಲೆ ಹಯದುಸಿರು |ಹುಳು ಹಾವಿಲಿಯ ಸುಯ್ಲು; ಹಕ್ಕಿ ಹದ್ದುಯ್ಲು ||ಕಲೆತಿರ್ಪುವೀಯೆಲ್ಲ ನಾಮುಸಿರ್ವೆಲರಿನಲಿ |ಕಲಬೆರಕೆ ಜಗದುಸಿರು - ಮಂಕುತಿಮ್ಮ ||
ಬರಿಯ ಹೆಣ್ ಬರಿಯ ಗಂಡೆಂಬುದಿಳೆಯೊಳಗಿಲ್ಲ |ಬೆರಕೆಯೆಲ್ಲರುಮರ್ಧನಾರೀಶನಂತೆ ||ನರತೆಯಣು ನಾರಿಯಲಿ ನಾರೀತ್ವ ನರನೊಳಣು |ತಿರಿಚುತಿರುವುದು ಮನವ - ಮಂಕುತಿಮ್ಮ ||