ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಐಕ್ಯ ನಾನಾತ್ವಗಳು; ನಿಯತಿ ಸ್ವತಂತ್ರಗಳು |ತರ್ಕ್ಯ ನಿಸ್ತರ್ಕ್ಯಗಳು ಬೆರೆತು ಚಿತ್ರದಲಿ ||ಶಕ್ಯಮುಂ ಪುರುಷತಂತ್ರಕ್ಕಶಕ್ಯಮುಮಾದ |ಸಿಕ್ಕುಗಳ ಕಂತೆ ಜಗ - ಮಂಕುತಿಮ್ಮ ||
ಧರೆಯ ನೀರ್ಗಾಗಸದ ನೀರಿಳಿದು ಬೆರೆವಂತೆ |ನರನ ಪ್ರಾಕ್ತನಕೆ ನೂತನಸತ್ತ್ವ ಬೆರೆತು ||ಪರಿವುದೀ ವಿಶ್ವಜೀವನಲಹರಿಯನವರತ |ಚಿರಪ್ರತ್ನನೂತ್ನ ಜಗ - ಮಂಕುತಿಮ್ಮ ||
ನಾಟಕದೊಳನುವಿಂದ ಬೆರೆತದನು ಮೆಚ್ಚೆನಿಸಿ |ನೋಟಕನುಮಾಗಿ ತಾಂ ನಲಿದು ನಲಿಯಿಸುವಾ ||ಪಾಠವನು ಕಲಿತವನೆ ಬಾಳನಾಳುವ ಯೋಗಿ |ಆಟಕಂ ನಯವುಂಟು - ಮಂಕುತಿಮ್ಮ ||
ನಿನ್ನ ಜೀವಿತವೆಲ್ಲ ನಿನ್ನ ಕೈಮಾಳ್ಕೆಯೇಂ? |ಅನ್ಯಶಕ್ತಿಗಳೆನಿತೊ ಬೆರೆತಿರುವುವಲ್ಲಿ ||ಅನ್ನವಿಡುವರು; ತಿಳಿವನೀವರ್; ಒಡನಾಡುವರು |ನಿನ್ನ ಬಾಳ್ಗಿವರಿರರೆ? - ಮಂಕುತಿಮ್ಮ ||
ಪರಬೊಮ್ಮನಾ ವಿಧಿಯ ನೇಮಿಸಿಹುದೇತಕೆನೆ |ನರಜಾತಿ ಸಾನುಭೂತಿಯ ಕಲಿಯಲೆಂದು ||ಪರರೆಂಬರಿಲ್ಲ ಆತ್ಮಾಂಶರೆಲ್ಲರೆನುತ್ತೆ |ಬೆರೆ ನೀನು ವಿಶ್ವದಲಿ - ಮಂಕುತಿಮ್ಮ ||
ಬಂಧನವದೇನಲ್ಲ ಜೀವಜೀವಪ್ರೇಮ |ಒಂದೆ ನಿಲೆ ಜೀವವರೆ; ಬೆರೆತರಳೆ ಪೂರ್ಣ ||ದಂದುಗವನ್ ಅರೆಗೆಯ್ದು; ಸಂತಸವನಿಮ್ಮಡಿಪ |ಬಾಂಧವ್ಯ ದೈವಕೃಪೆ - ಮಂಕುತಿಮ್ಮ ||
ಹಟವಾದಕೆಡೆಯೆಲ್ಲಿ ಮನುಜಪ್ರಪಂಚದಲಿ? |ಸೆಟೆಯೆಷ್ಟೊ ದಿಟವೆಷ್ಟೊ ಬೆರೆತಿರುವುವಿಲ್ಲಿ ||ಪಟುವಾಗಿ ನಿಲಲಹುದೆ ಮಣಲೊಳೆಸಗಿದ ಗೋಡೆ? |ಕಟುತೆ ಸಲ್ಲದು ಜಗಕೆ - ಮಂಕುತಿಮ್ಮ ||