ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎಲ್ಲರೊಳು ತಾನು ತನ್ನೊಳಗೆಲ್ಲರಿರುವವೋ- |ಲೆಲ್ಲೆಲ್ಲಿಯುಂ ನೋಡಿ ನಡೆದು ನಗುತಳುತ ||ಬೆಲ್ಲ ಲೋಕಕ್ಕಾಗಿ ತನಗೆ ತಾಂ ಕಲ್ಲಾಗ |ಬಲ್ಲವನೆ ಮುಕ್ತನಲ - ಮಂಕುತಿಮ್ಮ ||
ಎಲ್ಲಿಯದನೋ ಅದೆಲ್ಲಿಯದಕೋ ಹೆಣೆಯುವನು |ಒಲ್ಲೆವೆನೆ ನೀವೆ ಕಿತ್ತಾಡಿಕೊಳಿರೆನುವನ್ ||ಬೆಲ್ಲದಡುಗೆಯಲಿ ಹಿಡಿ ಮರಳನೆರಚಿರಿಸುವನು |ಒಳ್ಳೆಯುಪಕಾರಿ ವಿಧಿ - ಮಂಕುತಿಮ್ಮ ||
ಶಿಶುಗಳವಲಕ್ಕಿಬೆಲ್ಲದ ಸಂಭ್ರಮವ ನೋಡಿ |ಹಸಿವನೊಂದುವನೆ ಹಿರಿಯನು? ನಲಿಯದಿಹನೆ? ||ವಿಷಯಸಂಸಕ್ತಲೋಕವನ್ ಅನಾಸಕ್ತಿಯಿಂ- |ದೊಸೆದುನೋಳ್ಪನು ಜಾಣ - ಮಂಕುತಿಮ್ಮ ||
ಹುಲ್ಲಾಗು ಬೆಟ್ಟದಡಿ; ಮನೆಗೆ ಮಲ್ಲಿಗೆಯಾಗು |ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ ||ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ |ಎಲ್ಲರೊಳಗೊಂದಾಗು - ಮಂಕುತಿಮ್ಮ ||