ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? |ಅರೆಬೆಳಕು ಧರೆಯೊಳೆಂದೊರಲಿ ಸುಖವೇನು? ||ಇರುವ ಕಣ್ಣಿರುವ ಬೆಳಕಿನೊಳಾದನಿತ ನೋಡಿ |ಪರಿಕಿಸಿದೊಡದು ಲಾಭ - ಮಂಕುತಿಮ್ಮ ||
ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಿಲ್ಲಿ |ಎಲ್ಲಿ ಪರಿಪೂರಣವೊ ಅದನರಿಯುವನಕ ||ಸೊಲ್ಲಿಸುವರಾರು ಸೃಷ್ಟಿಯ ಪೇಟಿಯೊಳಗುಟ್ಟ? |ಎಲ್ಲ ಬಾಳು ರಹಸ್ಯ - ಮಂಕುತಿಮ್ಮ ||
ಎಲ್ಲ ಬರಿ ಗೊಣಗಾಟ; ತಿಣಕಾಟ; ತಡಕಾಟ |ಇಲ್ಲ ನಮಗೂರೆಕೋಲ್; ತಿಳಿಬೆಳಕುಮಿಲ್ಲ ||ಬಲ್ಲತನ ಮಬ್ಬಿನಲಿ ನಿದ್ರಿಸದೆ ತೆವಳುವುದು |ಸಲ್ಲದುಬ್ಬಟೆ ನಮಗೆ - ಮಂಕುತಿಮ್ಮ ||
ಕಾರಿರುಳೊಳಾಗಸದಿ ತಾರೆ ನೂರಿದ್ದೇನು? |ದಾರಿಗನ ಕಣ್ಗೆ ಬೇಕೊಂದು ಮನೆಬೆಳಕು ||ದೂರದಾ ದೈವವಂತಿರಲಿ; ಮಾನುಷಸಖನ |ಕೋರುವುದು ಬಡಜೀವ - ಮಂಕುತಿಮ್ಮ ||
ತಿಳಿವಿಗೊಳಿತೆನಿಸಿದುದು ನಡೆಯೊಳೇತಕ್ಕರಿದು? |ಕುಳಿ ಮೇಡು ದೂರ ಮತಿಮನಸುಗಳ ನಡುವೆ ||ಒಳಗಿನಾಯೆಣ್ಣೆಬತ್ತಿಗಳೆರಡುಮೊಡವೆರೆಯೆ |ಬೆಳಕು ಜೀವೋನ್ನತಿಗೆ - ಮಂಕುತಿಮ್ಮ ||
ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು |ಮಂಕುವಿಡಿಸಲು ಸಾಕು ಮಣ್ಣುಂಡೆ ಕಣ್ಗೆ ||ಶಂಕೆಗೆಡೆಯಿರದು ಕತ್ತಲೆಯೆ ಜಗವನು ಕವಿಯೆ |ಬೊಂಕುದೀವಿಗೆ ತಂಟೆ - ಮಂಕುತಿಮ್ಮ ||
ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ |ಬೆಳಕು ವೇಗಗಳೆನಿಪ ಕಾಲ ದಿಕ್ಕುಗಳ ||ಚಲನೆಯಲಿ ವಿಶ್ವಸಂಮೋಹನಗಳೆಲ್ಲವಾ |ವಿಲಸಿತವು ಬೊಮ್ಮನದು - ಮಂಕುತಿಮ್ಮ ||
ಹೊಳಪು ಹೊಳಪಿನ ನಡುವೆ ಬಿಡುವಿನಿತು ರತ್ನದಲಿ |ಬೆಳಕು ಬೆಳಕಿನ ನಡುವೆ ಅನಿತಿನಿತು ನೆರಳು ||ಬೆಳಸು ಬೆಳಸಿನ ಸಾಲು ನಡುವೆ ಬದಿ ಗದ್ದೆಯಲಿ |ಉಳಿವಿಗಳಿವಿನ ನೆರೆಯೊ - ಮಂಕುತಿಮ್ಮ ||