ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೂರುಗಳು ಹದಿನಾರು ಚಂದ್ರಮಂಡಲಕಂತೆ |ನೂರಾರು ಚೂರುಗಳು ಸತ್ಯಚಂದ್ರನವು ||ಸೇರಿಸುತಲವುಗಳನು ಬಗೆಯರಿತು ಬೆಳಸುತಿರೆ |ಸಾರ ಋತಪೂರ್ಣಿಮೆಯೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು |ಒಣಗಿದಂತಿರುವ ತೃಣಮೂಲ ಮೊಳೆಯುವುದು ||ಮನುಜರಳಿವರು ಮನುಜಸಂತಾನ ನಿಂತಿಹುದು |ಅಣಗದಾತ್ಮದ ಸತ್ತ್ವ - ಮಂಕುತಿಮ್ಮ ||

ಪಾರಿಜಾತವ ಕಂಡು ನಿಡುಸುಯ್ದು; ಪದಗಳಿಂ |ಶೌರಿಕಥೆಯನು ಹೆಣೆದು ತೃಪ್ತನಹನು ಕವಿ ||ಊರಿನುದ್ಯಾನಕದ ತರಿಸಿ ಬೆಳಸುವ ಕಾರ್ಯ- |ಧೀರನಲ ರಾಜ್ಯಕನು - ಮಂಕುತಿಮ್ಮ ||

ಮಗುವಾಗಿ ಬೊಂಬೆಗೆಂದತ್ತು ಪಿರಿಯರ ಕಾಡಿ |ಜಗದುಣಿಸುಗಳನುಂಡು ಬೆಳೆದವಂ ತಾನೆ ||ಮಗುಗಳನು ಬೆಳಸುತ್ತ ಮನೆಯನಾಳುವವೋಲು |ಜಗವನಾಳ್ವನು ಜಾಣ - ಮಂಕುತಿಮ್ಮ ||

ಹೊಳಪು ಹೊಳಪಿನ ನಡುವೆ ಬಿಡುವಿನಿತು ರತ್ನದಲಿ |ಬೆಳಕು ಬೆಳಕಿನ ನಡುವೆ ಅನಿತಿನಿತು ನೆರಳು ||ಬೆಳಸು ಬೆಳಸಿನ ಸಾಲು ನಡುವೆ ಬದಿ ಗದ್ದೆಯಲಿ |ಉಳಿವಿಗಳಿವಿನ ನೆರೆಯೊ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ