ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತರಿದುಬಿಡು; ತೊರೆದುಬಿಡು; ತೊಡೆದುಬಿಡು ನೆನಹಿಂದ |ಕರೆಕರೆಯ ಬೇರುಗಳ; ಮನದ ಗಂಟುಗಳ ||ಉರಕೆ ಸೊಗಸೆನಿಸಿದಾ ಪ್ರೀತಿಹಾರಮುಮೊರ್ಮೆ |ಉರುಳಪ್ಪುದಾತ್ಮಕ್ಕೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ತಲೆಯ ಮೇಗಡೆ ಬೇರು; ಕೆಳಗೆ ಕೊಂಬೆಲೆ ಚಿಗುರು |ಬಿಳಲೂರೆಗಳ ಲೆಕ್ಕಕಿಲ್ಲ ಕೊನೆ ಮೊದಲು ||ಬೆಳೆವುದೀ ಪರಿಯರಳಿಮರದಂತೆ ನರಕೋಟಿ |ನಲಿವನದರಲಿ ಬೊಮ್ಮ - ಮಂಕುತಿಮ್ಮ ||

ತಿಳಿವಾವುದಿಳೆಗೆ ಯುಗಯುಗದ ಬೆಳಕಾಗಿತ್ತೊ |ಹಳದೆಂದು ನೀನದನು ಕಳೆಯುವೆಯ; ಮರುಳೆ? ||ತಳಹದಿಯದಲ್ತೆ ನಮ್ಮೆಲ್ಲ ಹೊಸ ತಿಳಿವಿಂಗೆ? |ಹಳೆ ಬೇರು ಹೊಸ ತಳಿರು - ಮಂಕುತಿಮ್ಮ ||

ಪರಮಪದದಲಿ ನೋಡು : ಬೇರುಗಳ್ ವ್ಯೋಮದಲಿ |ಧರೆಗಿಳಿದ ಕೊಂಬುರಂಬೆಗಳು; ಬಿಳಲುಗಳು ||ಚಿರಂಜೀವಿವೃಕ್ಷವಿದು ವಿಶ್ವಜೀವಾಶ್ವತ್ಥ |ಪರಿಕಿಸಿದರರ್ಥವನು - ಮಂಕುತಿಮ್ಮ ||

ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು |ಹೊಸಯುಕ್ತಿ ಹಳೆತತ್ತ್ವದೊಡಗೂಡೆ ಧರ್ಮ ||ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ |ಜಸವು ಜನಜೀವನಕೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ