ಒಟ್ಟು 12 ಕಡೆಗಳಲ್ಲಿ , 1 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕಾಲನದಿಯಲಿ ನಮ್ಮ ಬಾಳದೋಣಿಯು ಮೆರೆದು |ತೇಲುತ್ತೆ ಭಯವ ಕಾಣದೆ ಸಾಗುತಿರಲು ||ಗಾಳಿಯಾವಗಮೊ ಬಂದೆತ್ತಣಿನೊ ಬೀಸುತ್ತ |ಮೇಲ ಕೀಳಾಗಿಪುದು - ಮಂಕುತಿಮ್ಮ ||
ತನುವೇನು? ಮನವೇನು? ಪರಮಾಣು ಸಂಧಾನ |ಕುಣಿಸುತಿಹುದುಭಯವನು ಮೂರನೆಯದೊಂದು ||ತೃಣದ ಹಸಿರಿನ ಹುಟ್ಟು ತಾರೆಯೆಸಕದ ಗುಟ್ಟು |ದಣಿಯದದನರಸು ನೀಂ - ಮಂಕುತಿಮ್ಮ ||
ನಾನೆಂಬುದೊಂದಂಶವಿತರ ಜಗವೊಂದಂಶ |ನಾನು ನೀನುಗಳಳಿದ ಸರ್ವೈಕ್ಯವೊಂದು ||ಧ್ಯಾನಿಸುತ್ತೈಕ್ಯವನು ಪಾಲಿಸುವುದುಭಯವನು |ಜಾಣಿನಾ ನಾಟಕವೊ - ಮಂಕುತಿಮ್ಮ ||
ನೈರಾಶ್ಯನಿರತಂಗೆ ದೇವತೆಗಳಿಂದೇನು? |ವೈರಾಗ್ಯಪಥಿಕಂಗೆ ನಷ್ಟಭಯವೇನು? ||ಪಾರಂಗತಂಗಂತರಾಳ ದೂರಗಳೇನು? |ಸ್ವೈರಪಥವಾತನದು - ಮಂಕುತಿಮ್ಮ ||
ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ |ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ||ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು |ಧನ್ಯನುಭಯವ ಮೀರೆ - ಮಂಕುತಿಮ್ಮ ||
ಮಾರನಂ ದಂಡಿಸಿರೆ ಗೌರಿಯಿಂ ಭಯವೇನು? |ಚಾರುಸಹಕಾರಿಯವಳೆಂದು ಶಿವನೊಲಿದನ್ ||ಮೀರೆ ಮೋಹವನು ಸಂಸಾರದಿಂ ಭಯವೇನು? |ದಾರಿ ಕೆಳೆಯದು ನಿನಗೆ - ಮಂಕುತಿಮ್ಮ ||
ಮುಗ್ಧನಾಗದೆ ಭುಜಿಸು ಭುಜಿಸಲಿಹುದನು ಜಗದಿ |ಮಾಧ್ವೀಕ ಭಯವಿರದು ಜಾಗರೂಕನಿಗೆ ||ದೃಗ್ದೃಶ್ಯಚಿತ್ರಪ್ರಪಂಚದಲಿ ಸೇರಿ ನೀಂ |ಮುಗ್ಧನಾಗದೆ ಸುಖಿಸು - ಮಂಕುತಿಮ್ಮ ||
ಮೃತ್ಯುವಿಂ ಭಯವೇಕೆ? ದೇಶಾಂತರಕ್ಕೊಯ್ವ |ಮಿತ್ರನಾತಂ; ಚಿತ್ರ ಹೊಸದಿರ್ಪುದಲ್ಲಿ ||ಸಾತ್ತ್ವಿಕದಿ ಬಾಳ್ದವಂಗೆತ್ತಲೇಂ ಭಯವಿಹುದು? |ಸತ್ರ ಹೊಸದಿಹುದು ನಡೆ - ಮಂಕುತಿಮ್ಮ ||
ಲೋಕದಲಿ ಭಯವಿರಲಿ; ನಯವಿರಲಿ; ದಯೆಯಿರಲಿ |ನೂಕುನುಗ್ಗುಗಳತ್ತ; ಸೋಂಕುರೋಗಗಳು ||ಸಾಕಿ ಸಲಹುವರುಮ್ ಅತ್ತಲೆ ನಿನಗೆ; ನಿನ್ನೆಲ್ಲ |ಲೋಕ ಮೂಲವು ನೋಡೊ - ಮಂಕುತಿಮ್ಮ ||
ಶುಭವಾವುದಶುಭವಾವುದು ಲೋಕದಲಿ ನೋಡೆ? |ವಿಭಜಿಸಲ್ಕಾಗದನ್ಯೋನ್ಯಸಂಬಂಧ ||ಉಭಯವನು ಮೀರ್ದ ಸಾಮ್ಯದ ನೀತಿಯೊಂದಿಹುದು |ಅಭಯಪಥವದು ನಿನಗೆ - ಮಂಕುತಿಮ್ಮ ||