ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇರುವ ಕೆಲಸವ ಮಾಡು ಕಿರಿದೆನದೆ ಮನವಿಟ್ಟು |ದೊರೆತುದ ಹಸಾದವೆಂದುಣ್ಣು ಗೊಣಗಿಡದೆ ||ಧರಿಸು ಲೋಕದ ಭರವ ಪರಮಾರ್ಥವನು ಬಿಡದೆ |ಹೊರಡು ಕರೆ ಬರಲ್ ಅಳದೆ - ಮಂಕುತಿಮ್ಮ ||
ಬಹುವಿದ್ಯೆ ಬಹುತರ್ಕ ಬಹುನೇಮ ಬೇಕಿಲ್ಲ |ವಹಿಸೆ ಜೀವನಭರವನದು ಹಗುರೆನಿಪವೊಲ್ ||ಸಹನೆ ಸಮರಸಭಾವವಂತಃಪರೀಕ್ಷೆಗಳು |ವಿಹಿತವಾತ್ಮದ ಹಿತಕೆ - ಮಂಕುತಿಮ್ಮ ||
ವ್ಯಾಮೋಹವಿಲ್ಲದ ಪ್ರೇಮ ನಿರ್ಭರವಿರಲಿ |ಭೀಮಸಾಹಸವಿರಲಿ ಹಗೆತನವನುಳಿದು ||ನೇಮನಿಷ್ಠೆಗಳಿರಲಿ ಡಂಭಕಠಿಣತೆ ಬಿಟ್ಟು |ಸೌಮ್ಯವೆಲ್ಲೆಡೆಯಿರಲಿ - ಮಂಕುತಿಮ್ಮ ||