ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎಣಿಕೆಯೊಳಿತಾದೊಡೆಯುಮೊಳಿತನಾಗಿಸದು ಹಟ |ಮಣಿಕನಕ ಸಂಕೋಲೆ ತನುವ ಬಂಧಿಸದೇಂ? ||ತನಯನಿರಿದಸಿ ನಿನ್ನ ಮೈಯ ಹುಣ್ಣಾಗಿಸದೆ? |ಮನ ಸರ್ವಸಮವಿರಲಿ - ಮಂಕುತಿಮ್ಮ ||
ಜೀವ ಜಡರೂಪ ಪ್ರಪಂಚವನದಾವುದೋ |ಆವರಿಸಿಕೊಂಡುಮೊಳನೆರೆದುಮಿಹುದಂತೆ||ಭಾವಕೊಳಪಡದಂತೆ ಅಳತೆಗಳವಡದಂತೆ |ಆ ವಿಶೇಷಕೆ ಮಣಿಯೊ - ಮಂಕುತಿಮ್ಮ ||
ತನ್ನಯ ಮನೋರಥಂಗಳ ಚಕ್ರವೇಗದಿನೆ |ತನ್ನ ಮಣಿಹಾರಗಳ ಸಿಕ್ಕು ಬಿಗಿತದಿನೇ ||ತನ್ನ ಸಂಕಲ್ಪ ವಿಪರೀತದಿನೆ ಮಾನವನ |ಬೆನ್ನು ಮುರಿದೀತೇನೊ! - ಮಂಕುತಿಮ್ಮ ||
ನೆನೆನೆನೆದು ಗಹನವನು; ಜೀವನರಹಸ್ಯವನು |ಮನವ ಬಳಲಿಸಿ ಸೋಲಿಸಿರುವ ತತ್ತ್ವವನು ||ಮನನದೇಕಾಂತದಲಿ ಮೌನದ ಧ್ಯಾನದಲಿ |ಮಣಿಮಣಿದು ಕೈಮುಗಿಯೊ - ಮಂಕುತಿಮ್ಮ ||
ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ||ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ |ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ ||
ಬಾಂದಳದ ಬಾಗು; ರವಿಕಿರಣಗಳ ನೀಳ್ಕೋಲು |ಇಂದುಮಣಿನುಣ್ಪು; ತಾರೆಗಳ ಕಣ್ಮಿನುಗು ||ಚೆಂದದಂಗಾಂಗಭಾವದಿ ಮೊದಲ ಪಾಠವಿವು |ಸೌಂದರ್ಯಗುರು ಪ್ರಕೃತಿ - ಮಂಕುತಿಮ್ಮ ||
ಮಣಿಮಂತ್ರತಂತ್ರಸಿದ್ಧಿಗಳ ಸಾಕ್ಷ್ಯಗಳೇಕೆ |ಮನಗಾಣಿಸಲು ನಿನಗೆ ದೈವದದ್ಭುತವ? ||ಮನುಜರೊಳಗಾಗಾಗ ತೋರ್ಪ ಮಹನೀಯಗುಣ |ವನುವಾದ ಬೊಮ್ಮನದು - ಮಂಕುತಿಮ್ಮ ||
ವೇದಾಂತವಾಕ್ಯಗಳ ನಮಕಾನುವಾಕಗಳ |ಕೇದಾರಗೌಳ ಮಣಿರಂಗಾರಭಿಗಳ ||ನಾದಂಗಳಲಿ ಮನವ ಬೆರಸಿ ನೀನುತ್ಕ್ರಮಿಸೆ |ಸಾಧನವೊ ಮುಕ್ತಿಗದು - ಮಂಕುತಿಮ್ಮ ||