ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನಗಿಂತ ಹಿರಿದ; ಭುವನಕ್ಕಿಂತ ಹಿರಿದೊಂದ- |ನನುಭವದ ಹಿಂದೆ; ಸೃಷ್ಟಿಯ ನೆರಳ ಹಿಂದೆ ||ಅನುಮಿತಿಸಿ ಮನುಜನಾ ಹಿರಿದನೆಳಸುವನೆಯ್ದೆ |ಮನುಜನೊಳಹಿರಿಮೆಯದು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ದನ ಸಿಂಗ ಹುಲಿ ಹಕ್ಕಿ ಹಾವು ಮೀನ್ಗಳಿಗೆಲ್ಲ |ಇನಿಸುಣಿಸು; ಬೆದೆ; ಬೆದರು---ಅಷ್ಟೆ ಜೀವಿತವು ||ಮನುಜನೆಂತನಿತರಿಂ ತೃಪ್ತಿವಡೆವನವಂಗೆ |ಕ್ಷಣಕ್ಷಣವು ಹೊಸ ಹಸಿವು - ಮಂಕುತಿಮ್ಮ ||

ಪ್ರಕೃತಿಯನವರತ ಮನುಜನ ತಿದ್ದುತಿರುವಂತೆ |ವಿಕೃತಿಗೊಳಿಸುವನವನುಮ್ ಆಕೆಯಂಗಗಳ ||ಭೂಕೃಷಿಕ ರಸತಂತ್ರಿ ಶಿಲ್ಪಿ ವಾಹನಯಂತ್ರಿ |ವ್ಯಾಕೃತಿಸರೇನವಳ? - ಮಂಕುತಿಮ್ಮ ||

ಬಹಿರದ್ಭುತವ ಮನುಜನಂತರದ್ಭುತವರಿತು |ಗ್ರಹಿಸುವಂತಾಗಿಸಲು ಪೂರ್ವಾನುಭವಿಗಳ್ ||ಬಹುಪರಿಯುಪಾಯಗಳ ನಿರವಿಸಿಹರದಕೇಕೆ |ಗಹಗಹಿಸುವೆಯೊ; ಮರುಳೆ? - ಮಂಕುತಿಮ್ಮ ||

ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |ಕೊನೆಯೆಲ್ಲಿ? ಚಿಂತಿಸೆಲೊ - ಮಂಕುತಿಮ್ಮ ||

ಸನ್ನಿಹಿತ ಮನುಜನಲಿ ದೈವಪಾಶವವೆರಡು |ಪುಣ್ಯ ಪಾಪದ ಮಿಶ್ರವವನ ಸ್ವಭಾವ ||ಕಣ್ಣೊಮ್ಮೆಯಾಗಸದ ಬೆಳಕಿನೊಡನಾಡುವುದು |ಮಣ್ಣೊಳುರುಳುವುದೊಮ್ಮೆ - ಮಂಕುತಿಮ್ಮ ||

ಸರ್ವಾರ್ಥ ಸಹಭಾಗಿತೆಗೆ ರಾಷ್ಟ್ರ ಕುಲ ವರ್ಗ |ಸರ್ವದಣು ತಾನೆನುತ್ತೋರೊರ್ವ ಮನುಜನ್ ||ಸರ್ವಜೀವ ಸಮೃದ್ಧಿಗನುಗೂಡಿ ದುಡಿಯುತಿರೆ |ಪರ್ವವಂದಿಳೆಗೆಲವೊ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ