ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ |ಕೃಮಿ ಬೀಜದಿಂ ಮತ್ಸ್ಯ ಮೃಗ ಮನುಜರಂತೆ ||ಕ್ರಮ ವಿವರವೇನಿರಲಿ ಸೃಷ್ಟಿಯ ವಿಧಾನದಲಿ |ಸಮಸದದು ಸತ್ತ್ವವನು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು |ಒಣಗಿದಂತಿರುವ ತೃಣಮೂಲ ಮೊಳೆಯುವುದು ||ಮನುಜರಳಿವರು ಮನುಜಸಂತಾನ ನಿಂತಿಹುದು |ಅಣಗದಾತ್ಮದ ಸತ್ತ್ವ - ಮಂಕುತಿಮ್ಮ ||

ನಟಿಪುದೊಮ್ಮೊಮ್ಮೆ ಮರುಕವ ದೈವ ಮನುಜರಲಿ |ಕಟುಕನಿನಿಸಕ್ಕಿಯನು ಹಕ್ಕಿಗೆರಚುವವೋಲ್ ||ತುಟಿ ಸುಟ್ಟು ರಸನೆಗೆಟುಕದ ಕೀರು ದೈವಕೃಪೆ |ತಟವಟವೊ ಸೃಷ್ಟಿದಯೆ - ಮಂಕುತಿಮ್ಮ ||

ಮಣಿಮಂತ್ರತಂತ್ರಸಿದ್ಧಿಗಳ ಸಾಕ್ಷ್ಯಗಳೇಕೆ |ಮನಗಾಣಿಸಲು ನಿನಗೆ ದೈವದದ್ಭುತವ? ||ಮನುಜರೊಳಗಾಗಾಗ ತೋರ್ಪ ಮಹನೀಯಗುಣ |ವನುವಾದ ಬೊಮ್ಮನದು - ಮಂಕುತಿಮ್ಮ ||

ಮನದಿಂದ ಮನಕೆ ಪಾರ್ವುದು ಬಾಳಿನುರಿಯ ಕಿಡಿ |ಮನೆಯಿಂದ ಮನೆಗಲೆವ ಗಾಳಿ ಹೊಗೆಯಂತೆ ||ಮನುಜರ ಪರಸ್ಪರೋದ್ರೇಕ ಜಗದ ವಿಲಾಸ |ಮನವೆ ಪರಮಾದ್ಭುತವೊ - ಮಂಕುತಿಮ್ಮ ||

ಮನುಜರೂಪದಿನಾದರವನು ಪಡೆಯದ ಹೃದಯ- |ವನುರಾಗವನು ಬಿಡಾಲಕೊ ಶುಕಕೊ ಕಪಿಗೋ ||ಶುನಕಕೋ ಸುರಿದದರ ಮಾರ್ದನಿಯನಾಲಿಪುದು |ತಣಿವು ಜೀವಸ್ವರದೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ