ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುರಾಗದುಃಖಂಗಳೊಮ್ಮೊಮ್ಮೆ ಬಿರುಬೀಸಿ |ಮನದಿ ತೆರೆಗಳ ಕುಲುಕಿ ಕಡೆಯುವುದುಮೊಳಿತು ||ಘನ ವರ್ಷ ಬಿರುಗಾಳಿ ಬಡಿಯಲಿರುಳೊಳ್ ನೆಲನ |ದಿನದ ಸೊಗಸಿಮ್ಮಡಿಯೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ನಟಿಪುದೊಮ್ಮೊಮ್ಮೆ ಮರುಕವ ದೈವ ಮನುಜರಲಿ |ಕಟುಕನಿನಿಸಕ್ಕಿಯನು ಹಕ್ಕಿಗೆರಚುವವೋಲ್ ||ತುಟಿ ಸುಟ್ಟು ರಸನೆಗೆಟುಕದ ಕೀರು ದೈವಕೃಪೆ |ತಟವಟವೊ ಸೃಷ್ಟಿದಯೆ - ಮಂಕುತಿಮ್ಮ ||

ನಿನ್ನಜ್ಜ ಮುತ್ತಜ್ಜ ಮೂಲಜ್ಜರೆಲ್ಲರುಂ |ನಿನ್ನೊಳವತರಿಸಿ ಮುಂದಿನ್ನು ಜನಿಸಲಿಹ ||ನಿನ್ನ ಮಗ ಮೊಮ್ಮ ಮರಿಮೊಮ್ಮರೊಳು ಜೀವಿಪ್ಪರ್ |ಅನ್ವಯ ಚಿರಂಜೀವಿ - ಮಂಕುತಿಮ್ಮ ||

ಮಾಯೆಯೊಮ್ಮೊಮ್ಮೆ ತೋರುವಳು ಮಿಗಿಲಕ್ಕರೆಯ |ಮಾಯಿಪಳು ಗಾಯಗಳನೀವಳಿಷ್ಟಗಳ ||ಮೈಯ ನೀಂ ಮರೆಯೆ ನೂಕುವಳಾಗ ಪಾತಳಕೆ |ಪ್ರೇಯಪೂತನಿಯವಳು - ಮಂಕುತಿಮ್ಮ ||

ಮುದಿಕುರುಡಿ ಹೊಂಗೆಯನು ``ಬಾದಾಮಿ; ಕೋ'ಯೆನುತ |ಪದುಳದಿಂ ಮೊಮ್ಮಂಗೆ ಕೊಡಲು ಸಿಹಿಯಹುದೆ? ||ಹೃದಯವೊಳಿತಾದೊಡೇಂ? ತಿಳಿವಿಹುದೆ? ಜಾಣಿಹುದೆ? |ಸುಧೆ ಬಂತೆ ಸುಲಭದಲಿ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ