ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟ ಜೀವದ ಪಾಕ; ಕಷ್ಟ ಧರ್ಮವಿವೇಕ |ಎಷ್ಟೆಷ್ಟು ನೀತಿಯುಕ್ತಿಗಳ ಬಗೆದಡೆಯುಂ ||ಇಷ್ಟಷ್ಟು ನಿನ್ನೊಳ್ ಒಳತಿಳಿವಿಲ್ಲದಿರೆ ನಷ್ಟ |ದೃಷ್ಟಿಸೂಕ್ಷ್ಮವೆ ಗತಿಯೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |ಬತ್ತವದನು ವಿಚಾರಯುಕ್ತಿಗಳು ಕುಟ್ಟೆ ||ತತ್ತ್ವತಂಡುಲ ದೊರೆಗುಮದು ವಿವೇಚಿತತತ್ತ್ವ |ನಿತ್ಯ ಭೋಜನ ನಮಗೆ - ಮಂಕುತಿಮ್ಮ ||

ಜೀವನವದೊಂದು ಕಲೆ; ಕಲೆಯ ಕಲಿಸುವುದೆಂತು? |ಸಾವಿರದ ನಿಯಮ ಯುಕ್ತಿಗಳನೊರೆದೊಡೆಯುಂ ||ಆವುದೋ ಕುಶಲತೆಯದೊಂದಿರದೆ ಜಯವಿರದು |ಆ ವಿವರ ನಿನ್ನೊಳಗೆ - ಮಂಕುತಿಮ್ಮ ||

ತೆರಪನರಿಯದೆ ಪರಿವ ಕಾಲಪ್ರವಾಹದಲಿ |ಪುರುಷರಚಿತಗಳೆನಿತೊ ತೇಲಿಹೋಗಿಹವು ||ಪುರ ರಾಷ್ಟ್ರ ದುರ್ಗಗಳು; ಮತ ನೀತಿ ಯುಕ್ತಿಗಳು |ಪುರುಷತನ ನಿಂತಿಹುದು - ಮಂಕುತಿಮ್ಮ ||

ಪ್ರಾಕ್ತನದ ವಾಸನೆಯೆ ಮನಕೆ ಮೊದಲಿನ ಮಂತ್ರಿ |ಯುಕ್ತಿಗಳ ತನಗೊಪ್ಪುವಂತೆ ತಿರುಗಿಪುದು ||ಸೂಕ್ತವೆನಿಪುದು ಸಹಜರುಚಿ ತನ್ನ ತರ್ಕವನೆ |ಗುಪ್ತದೊಳು ಕುಟಿಲವಿದು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ