ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವಿದಿತಾಖಂಡಸತ್ತ್ವದಪಾರ ಜಲಧಿಯಲಿ |ಭುವನದ ದ್ವೀಪ ಕಿಂಚಿನ್ಮಾತ್ರವಿದಿತ ||ಪವಿತಾಂತರಕ್ಷಿಗಾಯೆರಡುಮೊಂದೇ ವಸ್ತು |ವವಗುಂಠಿತ ಬ್ರಹ್ಮ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಒಣಗಿ ಬೇಸಗೆಯಿಂದ ಮಣ್ಣಾಗಿ ಕಾಣದಿಹ |ತೃಣ ಮೊಳೆಯುವುದು ಮರಳಿ ಹನಿಯೆರಡು ಬೀಳೆ ||ಅಣಗಿರ್ದು ನರನಾಶೆಯಂತು ಕಷ್ಟದ ದಿನದಿ |ಕುಣಿವುದನುಕೂಲ ಬರೆ - ಮಂಕುತಿಮ್ಮ ||

ಕಾಯಮಾತ್ರದುದಲ್ಲವಾತ್ಮಮಾತ್ರದುದಲ್ಲ- |ವಾಯೆರಡುಮೊಂದಾಗಲದು ಜೀವಲೀಲೆ ||ತಾಯಿವೊಲು ನಿನಗಾತ್ಮ; ಮಡದಿವೊಲು ಕಾಯವವ- |ರಾಯವನು ಸರಿನೋಡು - ಮಂಕುತಿಮ್ಮ ||

ತಾಯೊ ತಂಗಿಯೊ ಎನಿಪ ಶುಚಿಯ ಸೌಮ್ಯದ ಸೊಬಗು |ಪ್ರೇಯಸಿಯ ಕರೆವೊಲಾತುರವಡಿಪ ಬೆಡಗು ||ಈಯೆರಡು ಸಮದ ರುಚಿ ನಿನ್ನನಿಬ್ಬಗೆಗೊಳಿಸೆ |ಧ್ಯೇಯ ನಿನಗಾವುದೆಲೊ? - ಮಂಕುತಿಮ್ಮ ||

ಹೊಟ್ಟೆಯಲಿ ಹಸಿವು; ಮನದಲಿ ಮಮತೆ---ಈ ಯೆರಡು |ಗುಟ್ಟು ಕೀಲುಗಳಿಹುವು ಸೃಷ್ಟಿಯಂತ್ರದಲಿ ||ಕಟ್ಟಿಪುವು ಕೋಟೆಗಳ; ಕೀಳಿಪುವು ತಾರೆಗಳ |ಸೊಟ್ಟಾಗಿಪುವು ನಿನ್ನ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ