ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇರುವುದರೊಳಾದನಿತು ಸೊಗವ ಪಡೆವೊಡೆ ಲೋಗರ್ |ಅರಿಗೆ ಮೊದಲ್ ಇಹಕೆ ಪರದಾವರಣವಿಹುದನ್ ||ಪರಮಾರ್ಥಗಣಿತದಿಂದಿಹದರ್ಥಗಳನೆಣಿಸೆ |ಸರಿ ಲೋಕಬಾಂಧವ್ಯ - ಮಂಕುತಿಮ್ಮ ||
ಎರಡು ಕೋಣೆಗಳ ನೀಂ ಮಾಡು ಮನದಾಲಯದಿ |ಹೊರಕೋಣೆಯಲಿ ಲೋಗರಾಟಗಳನಾಡು ||ವಿರಮಿಸೊಬ್ಬನೆ ಮೌನದೊಳಮನೆಯ ಶಾಂತಿಯಲಿ |ವರಯೋಗಸೂತ್ರವಿದು - ಮಂಕುತಿಮ್ಮ ||
ಕಾಗೆಯುಂ ಕೋಗಿಲೆಯುಮೊಂದೆ ಮೇಲ್ನೋಟಕ್ಕೆ |ಯೋಗಿಯುಂ ಸಂಸಾರಭೋಗಿಯೇ ಹೊರಕೆ ||ಲೋಗರವೊಲಿರುತೆ ಸುಖದುಃಖಸಂಭ್ರಮಗಳಲಿ |ತ್ಯಾಗಿಯವನಂತರದಿ - ಮಂಕುತಿಮ್ಮ ||
ಕೊಳದ ಜಲ ನಿನ್ನ ಮನ; ಲೋಗರದರೊಳಗಿಳಿಯೆ |ತಳದ ಕಸ ತೇಲುತ್ತ ಬಗ್ಗಡವದಹುದು ||ಕಲಕದದ್ದದೆ ಕೊಂಚ ಬಿಟ್ಟಿದ್ದೊಡದು ಮರಳಿ |ತಿಳಿಯಹುದು ಶಾಂತಿಯಲಿ - ಮಂಕುತಿಮ್ಮ ||
ತಲೆಪಾಗಿನೊಳಕೊಳಕ; ಪಂಚೆನಿರಿಯೊಳಹರಕ |ತಿಳಿಸುವೆಯ ರಜಕಗಲ್ಲದೆ ಲೋಗರಿಂಗೆ? ||ಅಳಲುದುಗುಡಗಳ ನಿನ್ನೊಳಗೆ ಬಯ್ತಿಡದೆ ನೀ- |ನಿಳೆಗೆ ಹರಡುವುದೇಕೊ? - ಮಂಕುತಿಮ್ಮ ||
ನಗು; ಮನದಿ ಲೋಗರ ವಿಕಾರಂಗಳನು ನೋಡಿ |ಬಿಗಿ ತುಟಿಯ; ದುಡಿವಂದು ನೋವಪಡುವಂದು ||ಪೊಗು; ವಿಶ್ವಜೀವನದ ಜೀವಾಂತರಂಗದಲಿ |ನಗುನಗುತ ಬಾಳ್; ತೆರಳು - ಮಂಕುತಿಮ್ಮ ||
ಮೌನದಿಂದಂಬಲಿಯನುಂಡು ತಣಿಯುವ ಮಾನಿ |ಶ್ವಾನನುಣುವೆಂಜಲೋಗರಕೆ ಕರುಬುವನೆ? ||ಜ್ಞಾನಿ ನಡೆವಂ ವಿಷಯ ತರತಮವಿವೇಕದಲಿ |ಮಾಣು ನೀಂ ತಲ್ಲಣವ - ಮಂಕುತಿಮ್ಮ ||