ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅದರಿಂದ ನೀತಿ ನಯವದರಿಂದ ಕುಲಗೋತ್ರ |ವದರಿಂದ ರಾಜ್ಯ ಮಠ ಧರ್ಮ ಸಂಸ್ಥೆಗಳು ||ಒದವುವದರಿಂದೆ ಮಮತಾನಾಶದವಕಾಶ- |ವದರಿನಾತ್ಮವಿಕಾಸ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಜನ್ಮ ಸಾವಿರ ಬರಲಿ; ನಷ್ಟವದರಿಂದೇನು? |ಕರ್ಮ ಸಾವಿರವಿರಲಿ; ಕಷ್ಟ ನಿನಗೇನು? ||ಬ್ರಹ್ಮ ಹೃದಯದಿ ನಿಲ್ಲೆ ಮಾಯೆಯೇಂಗೈದೊಡೇಂ? |ಇಮ್ಮಿದಳ ಸರಸವದು - ಮಂಕುತಿಮ್ಮ ||

ನಿನ್ನೆಂಜಲಗುಳಾವ ಕಾಲುವೆಯ ಸೇರುವುದೊ! |ಮಣ್ಣಾವುದದರಿಂದೆ ಗರ್ಭವತಿಯಹುದೋ! ||ಅನ್ನವದರಿಂದಾರ್ಗೊ! ಲೋಕಕವರಿಂದೇನೊ! |ಬಣ್ನಿಸುವರಾರದನು? - ಮಂಕುತಿಮ್ಮ ||

ನಿನ್ನೇಳುಬೀಳುಗಳು ನಿನ್ನ ಸೊಗ ಗೋಳುಗಳು |ನಿನ್ನೊಬ್ಬನೋಸುಗವೆ ನಡೆವ ಯೋಜನೆಯೇಂ? ||ಇನ್ನದೆನಿಬರ ಜೀವಪಾಕವದರಿಂದಹುದೊ! |ಛನ್ನವಾ ಋಣಮಾರ್ಗ - ಮಂಕುತಿಮ್ಮ ||

ಲಾವಣ್ಯವಾತ್ಮಗುಣವದರಿಂದೆ ಲೋಕಜನ |ದೇವವನು ಕಮನೀಯ ವಿಗ್ರಹಂಗಳಲಿ ||ಭಾವಿಸುತ ತಮ್ಮಿಷ್ಟಭೋಗಗಳನರ್ಪಿಸುವ |ಸೇವೆಯಿಂ ನಲಿಯುವರು - ಮಂಕುತಿಮ್ಮ ||

ಸತ್ಯವೆಂಬುದದೇನು ಸೈನಿಕನ ಜೀವನದಿ? |ಕತ್ತಿಯವನಿಗೆ ಸತ್ಯವದರಿಂದ ಧರ್ಮ ||ಭುಕ್ತಿಸುಪ್ತಿಗಳ ವಿಭವಂಗಳವನಿಗೆ ಮಿಥ್ಯೆ |ಸಾರ್ಥಕತೆಯಿಂ ಸತ್ಯ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ