ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾನಪದಗಳು ರಾಜ್ಯಸಾಮ್ರಾಜ್ಯಗಳು ಗುರು |ಸ್ಥಾನಗಳು ಧರ್ಮಗಳು ಭಾಷೆ ವಿದ್ಯೆಗಳು ||ಕಾಣಿಸದೆ ಸಾಗಿಹವು ಕಾಲಪ್ರವಾಹದಲಿ |ಮಾನವತೆ ನಿಂತಿಹುದು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ನೂತ್ನತೆಯ ಪೂರ್ಣತೆಯನನ್ಯೂನತೆಯ ಗಳಿಪ |ಯತ್ನಮೇ ಪೌರುಷಪ್ರಗತಿ; ಅದೆ ಪ್ರಕೃತಿ ||ವಿಜ್ಞಾನ ಶಾಸ್ತ್ರ ಕಲೆ ಕಾವ್ಯ ವಿದ್ಯೆಗಳೆಲ್ಲ |ಧನ್ಯತೆಯ ಬೆದಕಾಟ - ಮಂಕುತಿಮ್ಮ ||

ಬಹುವಿದ್ಯೆ ಬಹುತರ್ಕ ಬಹುನೇಮ ಬೇಕಿಲ್ಲ |ವಹಿಸೆ ಜೀವನಭರವನದು ಹಗುರೆನಿಪವೊಲ್ ||ಸಹನೆ ಸಮರಸಭಾವವಂತಃಪರೀಕ್ಷೆಗಳು |ವಿಹಿತವಾತ್ಮದ ಹಿತಕೆ - ಮಂಕುತಿಮ್ಮ ||

ಭಾವರಾಗೋದ್ರೇಕ ತಾನೆ ತಪ್ಪೇನಲ್ಲ |ಧೀವಿವೇಕದ ಸಮತೆಯದರಿನದಿರದಿರೆ ||ಸ್ವಾವಿದ್ಯೆಯಾ ಮೋಹ ಮಮತೆಯದನಂಟದಿರೆ |ಪಾವನವೊ ಹೃನ್ಮಥನ - ಮಂಕುತಿಮ್ಮ ||

ಯುದ್ಧವಾಗಲಿ ರಾಜ್ಯವಿದ್ಯೆಯಾಗಲಿ ಶಾಸ್ತ್ರ- |ವೃದ್ಧಿಯಾಗಲಿ ನರನ ಹಣೆಯಿನಳಿಯಿಸದಾ ||ಕ್ಷುದ್ರಕಾರ್ಪಣ್ಯದನ್ಯಾಯದನಿತಿನಿತುಳಿಕೆ- |ಯಿದ್ದೆಯಿರುವುದು ನಮಗೆ - ಮಂಕುತಿಮ್ಮ ||

ಸಹಜ ನಗ್ನತೆ ನಮಗೆ; ಸಹಜ ನಖದಾಡಿಗಳು |ಬಹುಯುಗದ ಸಂಸ್ಕಾರ ವಸ್ತ್ರ ಸಿಂಗಾರ ||ಸಹಜತೆ ನಿರಕ್ಷರತೆ; ವಿದ್ಯೆ ತಾಂ ಕೃತಕವಲ |ಸಹಜದಿನೆ ಕೃತಕಮುಂ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ