ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದೊ ನಿನಗೊಂದುದಿನ ಮೂಗು ಮುರಿಯುವುದು ದಿಟ |ವೃಂದಾರಕರು ಮತ್ಸರಿಸರೆ ಗರ್ವಿತರ? ||ಸಂದರ್ಭಗಳನದಕೆ ಜೋಡಿಪನು ವಿಧಿರಾಯ |ಅಂದಿಕೊಳ್ಳನೆ ನಿನ್ನ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ತಾಳಿ ಮೆಲುಮೆಲನೊಮ್ಮೆ ಧಾಳಿ ರಭಸದಿನೊಮ್ಮೆ |ಹೇಳದೆಯೆ ಕೇಳದೆಯೆ ಬಹನು ವಿಧಿರಾಯ ||ಕೀಳ ಮೇಲಾಗಿಪನು ಮೇಲ ಕೀಳಾಗಿಪನು |ತಾಳುಮೆಯಿನಿರು ನೀನು - ಮಂಕುತಿಮ್ಮ ||

ತಿರುಗಿಸಲಿ ವಿಧಿರಾಯನಿಚ್ಛೆಯಿಂ ಯಂತ್ರವನು |ಚರಿಕೆ ತಾರಾಗ್ರಹಗಳಿಷ್ಟವೋದಂತೆ ||ಪರಿಹಾಸದಿಂ ಕರ್ಮ ದೈವ ಕೇಕೆಗಳಿಡಲಿ |ಸ್ಥಿರಚಿತ್ತ ನಿನಗಿರಲಿ - ಮಂಕುತಿಮ್ಮ ||

ಲೀಲೆಯೇಂ ಬಾಳೆಲ್ಲ? ಛೀ ತಳ್ಳು ಹಾಸ್ಯವನು |ಬಾಲರೇಂ ನಾವಿನ್ನುಮೆನುತ ಪಲ್ಕಡಿದು ||ಖೇಲನವ ಬೇಡವೆನುವರನು ವಿಧಿರಾಯನವ--- |ಹೇಳಿಪನು ಸೆರೆವಿಡಿದು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ