ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸಮದಲಿ ಸಮತೆಯನು ವಿಷಮದಲಿ ಮೈತ್ರಿಯನು |ಅಸಮಂಜಸದಿ ಸಮನ್ವಯ ಸೂತ್ರ ನಯವ ||ವೆಸನಮಯ ಸಂಸಾರದಲಿ ವಿನೋದವ ಕಾಣ್ಬ |ರಸಿಕತೆಯೆ ಯೋಗವೆಲೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಪ್ರೇಮಬೀಜಗಳಿಹುವು ವೈರಬೀಜಗಳವೊಲೆ |ಸೌಮ್ಯಮುಂ ಸಂಕ್ಷೋಭೆಯಂತೆ ಪ್ರಕೃತಿಯಲಿ ||ಭ್ರಾಮಕದ ಸೃಷ್ಟಿಯಾ ವಿಷಮಲಕ್ಷಣಗಳಲಿ |ಸಾಮರಸ್ಯವನರಸೊ - ಮಂಕುತಿಮ್ಮ ||

ರುಚಿಯೊಪ್ಪೆ ರಸನೆಗದು ಶೂಲವಹುದುದರಕ್ಕೆ |ತ್ವಚೆ ಬೇಳ್ಪ ತಂಗಾಳಿಯಿಂ ಬೇನೆಯೆದೆಗೆ ||ರಚಿಸಿದವನಿಂತೊಡಲೊಳಿಡೆ ವಿಷಮ ಕುಟಿಲಗಳ |ಉಚಿತವಾವುದೊ ನಿನಗೆ? - ಮಂಕುತಿಮ್ಮ ||

ವಿಷಯಭೋಗವಿರಕ್ತಿ; ವಿಶ್ವಲೀಲಾಸಕ್ತಿ |ಕೃಷಿಗೆ ಸಂತತ ದೀಕ್ಷೆ; ವಿಫಲಕೆ ತಿತಿಕ್ಷೆ ||ವಿಷಮದಲಿ ಸಮದೃಷ್ಟಿ; ವಿವಿಧಾತ್ಮ ಸಂಸೃಷ್ಟಿ |ಕುಶಲಸಾಧನಗಳಿವು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ