ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ |ಗುಣಿಸುವನು ಭೂತಶಕ್ತಿಗಳನದರಿಂದೇಂ? ||ಗಣಿತಸಾಧ್ಯದ ಹಿಂದಗಣ್ಯದ ಮಹತ್ತತ್ತ್ವ |ವಣಗಿಹುದು ಮೂಲವದು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಎನಿತೆನಿತ್ತು ವಿಕಾರ ಪರಿಣಾಮಗಳ ನಮ್ಮ |ಮನಕಾಗಿಪುವೊ ಲೋಕರೂಪಶಕ್ತಿಗಳು ||ಅನಿತನಿತು ಸತ್ಯತೆಯವಕ್ಕುಂಟು ಜೀವಿತದಿ |ಅನುಭವವೆ ದಿಟದಳತೆ - ಮಂಕುತಿಮ್ಮ ||

ಒಡೆಯನೆಂದೋ ಬಂದು ಕೇಳ್ವನದಕುತ್ತರವ |ಕೊಡಬೇಕು ತಾನೆನುವವೊಲು ಋಜುತೆಯಿಂದ ||ಒಡಲ; ಜಾಣಿನ; ಜೀವಶಕ್ತಿಗಳನೆಲ್ಲವನು |ಮುಡುಪುಕೊಟ್ಟನು ಭರತ - ಮಂಕುತಿಮ್ಮ ||

ನರರ ಭಯಬಯಕೆಗಳೆ ಸುರರ ತಾಯ್ತಂದೆಗಳೊ? |ಸುರರಟ್ಟಹಾಸದಿನೆ ನರಭಕ್ತಿಯೊರಲೋ? ||ಪರಿಕಿಸುವರೇನವರ್ಗಳನ್ಯೋನ್ಯಶಕ್ತಿಗಳ? |ಧರುಮವೆಲ್ಲಿದರಲ್ಲಿ? - ಮಂಕುತಿಮ್ಮ ||

ನಿನ್ನ ಜೀವಿತವೆಲ್ಲ ನಿನ್ನ ಕೈಮಾಳ್ಕೆಯೇಂ? |ಅನ್ಯಶಕ್ತಿಗಳೆನಿತೊ ಬೆರೆತಿರುವುವಲ್ಲಿ ||ಅನ್ನವಿಡುವರು; ತಿಳಿವನೀವರ್; ಒಡನಾಡುವರು |ನಿನ್ನ ಬಾಳ್ಗಿವರಿರರೆ? - ಮಂಕುತಿಮ್ಮ ||

ಭೌತವಿಜ್ಞಾನಿ ರವಿತಾರೆಧರೆಗಳ ಚಲನ |ರೀತಿ ವೇಗವನಳೆದು ಶಕ್ತಿಗಳ ಗುಣಿಪನ್ ||ಪ್ರೀತಿರೋಷಗಳನವನಳೆವನೇನ್? ಅವ್ಯಕ್ತ |ಚೇತನವನರಿವನೇಂ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ