ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಏನಾದೊಡೆಯುಮಪ್ಪುದುಂಟು; ಸಿದ್ಧನಿರದಕೆ |ಭಾನು ತಣುವಾದನು; ಸೋಮ ಸುಟ್ಟಾನು ||ಕ್ಷೋಣಿಯೇ ಕರಗೀತು; ಜಗ ಶೂನ್ಯವಾದೀತು |ಮೌನದಲಿ ಸಿದ್ಧನಿರು - ಮಂಕುತಿಮ್ಮ ||
ಶೂನ್ಯವೆಲ್ಲವುಮೆಂಬೊಡಂತೆನಿಸುವುದದೇನು? |ಅನ್ಯವಿಲ್ಲೆನುವರಿವದೊಂದಿರ್ಪುದಲ್ತೆ? ||ಚಿನ್ಮಯವನದನೆ ನೀಂ ಸತ್ಯವೆಂದಾಶ್ರಯಿಸು |ಶೂನ್ಯವಾದವೆ ಶೂನ್ಯ - ಮಂಕುತಿಮ್ಮ ||