ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರೆಗಳಿಗೆಯನುಭವವೆ ಮಾನಸವ ಕರಗಿಸದೆ? |ಪರಿಪಕ್ವಗೊಳಿಸದೇನದು ಜೀವರಸವ? ||ಉರಿ ತಣಿಪುಗಳಿನಾತ್ಮಸಂಸ್ಕಾರಗಳನೆಸಪ |ಪುರುಳ ಪುಸಿಯೆನ್ನುವೆಯ? - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಆರಿಗಾವುದು ತಕ್ಕುದಾರಿಗಾವುದು ದಕ್ಕ- |ದೀ ರಹಸ್ಯದಿನಾದ ಸಾಹ್ಯವುಪಕಾರ ||ತಾರತಮ್ಯವಿವೇಕವರಿಯದಾ ಸಂಸ್ಕಾರ |ಪ್ರೇರಕವೊ ಚೌರ್ಯಕ್ಕೆ - ಮಂಕುತಿಮ್ಮ ||

ಕ್ಷುತ್ತುಮಮತೆಗಳು ಜೀವಕೆ ಕುಲಿಮೆಸುತ್ತಿಗೆಗಳ್ |ಉತ್ತಮವದೆನಿಪುವುವು ಕಿಟ್ಟಗಳ ಕಳೆದು ||ಚಿತ್ತಸಂಸ್ಕಾರಸಾಧನವಯ್ಯ ಸಂಸಾರ |ತತ್ತ್ವಪ್ರವೃತ್ತಂಗೆ - ಮಂಕುತಿಮ್ಮ ||

ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |ಶಕ್ತಿಯಧ್ಯಾತ್ಮಕದು - ಮಂಕುತಿಮ್ಮ ||

ಮನೆಯೆ ಮಠವೆಂದು ತಿಳಿ; ಬಂಧು ಬಳಗವೆ ಗುರುವು |ಅನವರತಪರಿಚರ್ಯೆಯವರೊರೆವ ಪಾಠ ||ನಿನಗುಳಿದ ಜಗವ ಮುಟ್ಟಿಪ ಸೇತು ಸಂಸಾರ |ಮನಕೆ ಪುಟಸಂಸ್ಕಾರ - ಮಂಕುತಿಮ್ಮ ||

ಸಹಜ ನಗ್ನತೆ ನಮಗೆ; ಸಹಜ ನಖದಾಡಿಗಳು |ಬಹುಯುಗದ ಸಂಸ್ಕಾರ ವಸ್ತ್ರ ಸಿಂಗಾರ ||ಸಹಜತೆ ನಿರಕ್ಷರತೆ; ವಿದ್ಯೆ ತಾಂ ಕೃತಕವಲ |ಸಹಜದಿನೆ ಕೃತಕಮುಂ - ಮಂಕುತಿಮ್ಮ ||

ಸಾಮಾನ್ಯರೂಪದಲಿ; ಸಂಸಾರಿವೇಷದಲಿ |ಸ್ವಾಮಿ ನಿನ್ನೆಡೆಗೆ ಬರಬಹುದು ವರ ನೀಡಿ ||ಮೈಮೆ ಕಾಂಬೊಡೆ ನಿನಗೆ ಸಂಸ್ಕಾರವಿರಬೇಕು |ತಾಮಸಿಗೆ ವರವೆಲ್ಲಿ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ