ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಯದಿಂದ ಸೋಕು; ನೀಂ ದಯೆಯಿಂದ ನೋಡದನು |ಭಯದಿನೋಲಗಿಸು; ನೀಂ ಪೂಜೆಗೈಯದನು ||ಸ್ವಯಮಂಕುರಿತ ಸಕಲ ವಿಶ್ವಸತ್ತ್ವವೊ; ಜೀವ |ಪ್ರಿಯತಮವೊ ಸೃಷ್ಟಿಯಲಿ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಬುದ್ಧಿಮಾತಿದು ನಿನಗೆ : ಸಿದ್ಧನಿರು ಸಕಲಕ್ಕಮ್ |ಎದ್ದು ಕುಣಿಯಲಿ ಕರ್ಮ; ದೈವ ನಿದ್ರಿಸಲಿ ||ಅದ್ಭುತಗಳರಿದಲ್ಲ; ಭವ್ಯಕ್ಕೆ ಹದ್ದಿಲ್ಲ |ಸಿದ್ಧನಾಗೆಲ್ಲಕಂ - ಮಂಕುತಿಮ್ಮ ||

ಮೂರಿರಲಿ ವಾದ; ಮುನ್ನೂರಿರಲಿ; ಸಕಲರುಂ |ಸಾರವಸ್ತುವನೊಂದನೊಪ್ಪಿಕೊಳುವವರೇ ||ಪಾರಮಾರ್ಥಿಕವನಂತೆಣಿಸಿದ ವ್ಯವಹಾರ |ಭಾರವಾಗದು ಜಗಕೆ - ಮಂಕುತಿಮ್ಮ ||

ಹೊರಗೆ ಲೋಕಾಸಕ್ತಿಯೊಳಗೆ ಸಕಲ ವಿರಕ್ತಿ |ಹೊರಗೆ ಕಾರ್ಯಧ್ಯಾನವೊಳಗುದಾಸೀನ ||ಹೊರಗೆ ಸಂಸೃತಿಭಾರವೊಳಗದರ ತಾತ್ಸಾರ |ವರಯೋಗಮಾರ್ಗವಿದು - ಮಂಕುತಿಮ್ಮ ||

ಹೋರಾಡು ಬೀಳ್ವನ್ನಮೊಬ್ಬೊಂಟಿಯಾದೊಡಂ |ಧೀರಪಥವನೆ ಬೆದಕು ಸಕಲಸಮಯದೊಳಂ ||ದೂರದಲಿ ಗೊಣಗುತ್ತ ಬಾಳ್ವ ಬಾಳ್ಗೇನು ಬೆಲೆ? |ಹೋರಿ ಸತ್ತ್ವವ ಮೆರಸು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ