ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸಮದಲಿ ಸಮತೆಯನು ವಿಷಮದಲಿ ಮೈತ್ರಿಯನು |ಅಸಮಂಜಸದಿ ಸಮನ್ವಯ ಸೂತ್ರ ನಯವ ||ವೆಸನಮಯ ಸಂಸಾರದಲಿ ವಿನೋದವ ಕಾಣ್ಬ |ರಸಿಕತೆಯೆ ಯೋಗವೆಲೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಗುದ್ದಲಿಯಿನಾದೀತೆ ಮಲೆ ಕಣಿವೆ ಸಮದ ನೆಲ? |ಮದ್ದು ತಡೆವುದೆ ಮುಪ್ಪು ಕಳ್ಳನವೊಲಮರೆ? ||ಯುದ್ಧತಾಪದೆ ಶಾಂತಿಶೀತಲತೆಯುದಿಸೀತೆ? |ಸಿದ್ಧವಿರು ಸೈರಣೆಗೆ - ಮಂಕುತಿಮ್ಮ ||

ತಾಯೊ ತಂಗಿಯೊ ಎನಿಪ ಶುಚಿಯ ಸೌಮ್ಯದ ಸೊಬಗು |ಪ್ರೇಯಸಿಯ ಕರೆವೊಲಾತುರವಡಿಪ ಬೆಡಗು ||ಈಯೆರಡು ಸಮದ ರುಚಿ ನಿನ್ನನಿಬ್ಬಗೆಗೊಳಿಸೆ |ಧ್ಯೇಯ ನಿನಗಾವುದೆಲೊ? - ಮಂಕುತಿಮ್ಮ ||

ವಿಷಯಭೋಗವಿರಕ್ತಿ; ವಿಶ್ವಲೀಲಾಸಕ್ತಿ |ಕೃಷಿಗೆ ಸಂತತ ದೀಕ್ಷೆ; ವಿಫಲಕೆ ತಿತಿಕ್ಷೆ ||ವಿಷಮದಲಿ ಸಮದೃಷ್ಟಿ; ವಿವಿಧಾತ್ಮ ಸಂಸೃಷ್ಟಿ |ಕುಶಲಸಾಧನಗಳಿವು - ಮಂಕುತಿಮ್ಮ ||

ಹೊರಗು ಹೊರೆಯಾಗದವೊಲ್ ಒಳಗನನುಗೊಳಿಸಿ; ನೀ- |ನೊಳಗು ಶೆಕೆಯಾಗದವೊಲ್ ಅಳವಡಿಸೆ ಹೊರಗ ||ಸರಿಸಮದೊಳೆರಡನುಂ ಬಾಳಿನಲಿ ಜೋಡಿಪುದೆ |ಪರಮಜೀವನಯೋಗ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ