ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |ಸಲೆ ಬಗೆಯಲದು ಪರಬ್ರಹ್ಮ ವಿಸ್ಫುರಣೆ ||ಥಳಥಳಿಕೆ ವಜ್ರದಲಿ ನೈಜವಿರುವಂತೆಯು |ಜ್ಜ್ವಲತೆ ಬೊಮ್ಮಗೆ ನೈಜ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಜೀವಕಾರಣಮೂಲ ಗೂಢವಾಗಿರ್ದೊಡಂ |ಧೀವಿಕಾಸದ ಬೆಳಕನಾದನಿತು ಗಳಿಸಿ ||ಕೈವಲ್ಯಪಥವನರಸುತ ಯಾತ್ರಿಸಲೆಬೇಕು |ದೀವಿಗೆಯು ಮತಿಯೊಂದೆ - ಮಂಕುತಿಮ್ಮ ||

ಪರಬೊಮ್ಮ ಜೀವಭೇದದಿ ನಿಜೈಕ್ಯವ ಮರೆಯೆ |ಮರಳಿ ತನ್ನೊಟ್ಟನವನರಸಲೆಚ್ಚರಿಸಲ್ ||ನರನಾರಿಯರ ಪರಸ್ಪರ ಮೋಹದಲಿ ಮಾಯೆ |ನಿರವಿಸಿಹಳಂಕುಶವ - ಮಂಕುತಿಮ್ಮ ||

ಬಹಿರಂತರೈಕ್ಯವನು ನೆನಪಿಗಾಗಿಸಲೆಂದು |ವಿಹಿತಮ್ ಆಚಮನಾರ್ಘ್ಯ ಪೂಜೆ ನೈವೇದ್ಯ ||ಗುಹೆಯೊಳಗಣದ ಹೊರಗಣದ ಕೂಡಿಸುವುಪಾಯ |ಸಹಭಾವವದಕೆ ಸರಿ - ಮಂಕುತಿಮ್ಮ ||

ಸತ್ಯವಂತನನರಸಲೆನುತ ಪೇಟೆಗಳೊಳಗೆ |ಹಟ್ಟಹಗಲೊಳೆ ದೀವಿಗೆಯ ಹಿಡಿದು ನಡೆದು ||ಕೆಟ್ಟುದೀ ಜಗವೆಂದು ತೊಟ್ಟಿಯೊಳೆ ವಸಿಸಿದನು |ತಾತ್ತ್ವಿಕ ಡಯೋಜೆನಿಸ್ - ಮಂಕುತಿಮ್ಮ ||

ಸಿರಿಮಾತ್ರಕೇನಲ್ಲ; ಪೆಣ್ಮಾತ್ರಕೇನಲ್ಲ |ಕರುಬಿ ಜನ ಕೆಸರುದಾರಿಯಲಿ ಸಾಗುವುದು ||ಬಿರುದ ಗಳಿಸಲಿಕೆಸಪ; ಹೆಸರ ಪಸರಿಸಲೆಸಪ |ದುರಿತಗಳ್ಗೆಣೆಯುಂಟೆ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ