ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸಮದಲಿ ಸಮತೆಯನು ವಿಷಮದಲಿ ಮೈತ್ರಿಯನು |ಅಸಮಂಜಸದಿ ಸಮನ್ವಯ ಸೂತ್ರ ನಯವ ||ವೆಸನಮಯ ಸಂಸಾರದಲಿ ವಿನೋದವ ಕಾಣ್ಬ |ರಸಿಕತೆಯೆ ಯೋಗವೆಲೊ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಆವ ಗಾಳಿಯದಾವ ಧೂಳ್ಕಣವ ಪೊತ್ತಿಹುದೊ! |ಆವ ಧೂಳಿನೊಳಾವ ಚೈತನ್ಯಕಣವೋ! ||ಜೀವವಿಂತಜ್ಞಾನ ಸೂತ್ರದಾಟದ ಬೊಂಬೆ |ಭಾವಿಸಾ ಸೂತ್ರಗಳ - ಮಂಕುತಿಮ್ಮ ||

ಎರಡು ಕೋಣೆಗಳ ನೀಂ ಮಾಡು ಮನದಾಲಯದಿ |ಹೊರಕೋಣೆಯಲಿ ಲೋಗರಾಟಗಳನಾಡು ||ವಿರಮಿಸೊಬ್ಬನೆ ಮೌನದೊಳಮನೆಯ ಶಾಂತಿಯಲಿ |ವರಯೋಗಸೂತ್ರವಿದು - ಮಂಕುತಿಮ್ಮ ||

ಕಾಯಕವ ಚರಿಪುದಾತ್ಮ ಜುಗುಪ್ಸೆಗೆಡೆಗುಡದೆ |ಆಯತದ ಲೋಕಧರ್ಮಗಳ ಪಾಲಿಪುದು ||ಆಯತಿಗೆ ಬಾಯ್ಬಿಡದೆ ಗತವ ಚಿಂತಿಸದಿಹುದು |ಧ್ಯೇಯವೀ ಸೂತ್ರಗಳು - ಮಂಕುತಿಮ್ಮ ||

ತನುರುಜೆಗೆ ಪಥ್ಯಾನ್ನ; ಬಾಯ ಚಪಲಕ್ಕಲ್ಲ |ಮನದ ಶಿಕ್ಷೆಗೆ ಲೋಕ; ಮಮಕಾರಕಲ್ಲ ||ಗುಣಚರ್ಯೆ ವಿಶ್ವಸಮರಸಕೆ; ಕಾಮಿತಕಲ್ಲ |ಮುನಿವೃತ್ತಿ ಸೂತ್ರವಿದು - ಮಂಕುತಿಮ್ಮ ||

ಪಿರಿದೆಲ್ಲ ಮತನೀತಿಗಳಿಗಿಂತ ಜೀವಿತವು |ನೆರೆಬಂದ ನದಿ ದಡಕೆ ಬಾಗಿ ಪರಿಯುವುದೇಂ? ||ಧರುಮಸೂಕ್ಷ್ಮದ ತಿಳಿವೆ ಲೋಕಸೂತ್ರದ ಸುಳುವು |ಅರಸು ಜೀವಿತ ಹಿತವ - ಮಂಕುತಿಮ್ಮ ||

ಮೆಣಸು ಹಿಪ್ಪಲಿ ಶುಂಠಿ ಜೀರಿಗೆಗಳೆಲ್ಲ ಸರಿ |ಅನುವಪ್ಪುದೊಂದೊಂದು ರೋಗಕೊಂದೊಂದು ||ನಿನಗಮಂತೆಯೆ ನೂರು ನೀತಿಸೂತ್ರಗಳಿರಲು |ಅನುವನರಿವುದೆ ಜಾಣು - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ