ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವುದೋ ಒಳಿತೆಂದು ಆವುದೋ ಸೊಗವೆಂದು |ಆವಾವ ದಿಕ್ಕಿನೊಳಮಾವಗಂ ಬೆದಕಿ ||ಜೀವ ಪರಿಧಾವಿಪವೊಲ್ ಆಗಿಪಂತರ್ವೃತ್ತಿ |ಭಾವುಕದ ನೆಲೆಯ ಕರೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಇರುವುದರೊಳಾದನಿತು ಸೊಗವ ಪಡೆವೊಡೆ ಲೋಗರ್ |ಅರಿಗೆ ಮೊದಲ್ ಇಹಕೆ ಪರದಾವರಣವಿಹುದನ್ ||ಪರಮಾರ್ಥಗಣಿತದಿಂದಿಹದರ್ಥಗಳನೆಣಿಸೆ |ಸರಿ ಲೋಕಬಾಂಧವ್ಯ - ಮಂಕುತಿಮ್ಮ ||

ಎದೆ ಮಾರುವೋಗದೊಡೆ; ಕಣ್ ಸೊಬಗನುಂಡರೇಂ? |ಹೃದಯ ಮುಯ್ ಕೇಳದೊಡೆ; ನಲವ ಸೂಸಿದರೇಂ? ||ಕದಡದಿರ್ದೊಡೆ ಮನವ; ತನು ಸೊಗವ ಸವಿದೊಡೇಂ? |ಮುದ ತಾನೆ ತಪ್ಪಲ್ಲ - ಮಂಕುತಿಮ್ಮ ||

ಒಬ್ಬನುಣುವೂಟದಲಿ ಸವಿಯಿಲ್ಲ ಸೊಗವಿಲ್ಲ |ಇಬ್ಬರಾಗುವೆನೆಂದನಂತೆ ಪರಬೊಮ್ಮಂ ||ಹೆಬ್ಬದುಕನೊಂಟಿತನದೊಳದೇನು ಬದುಕುವೆಯೊ? |ತಬ್ಬಿಕೊಳೊ ವಿಶ್ವವನು - ಮಂಕುತಿಮ್ಮ ||

ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ |ಮುಗಿವ ತರಣಿಯ ರಕ್ತ ಹಿತವೆನಿಸದೇಕೊ! ||ಸೊಗದ ಮೂಲವದೆಲ್ಲಿ ನೀಲದೊಳೊ ಕೆಂಪಿನೊಳೊ |ಬಗೆವೆನ್ನ ಮನಸಿನೊಳೊ? - ಮಂಕುತಿಮ್ಮ ||

ತನಗೆ ಬಾರದ ಲಾಭ ತನಯಂಗೆ ಬಂದಾಗ |ಜನಕನ್ ಅದು ತನದೆಂದು ಸಂತಸಿಪ ತೆರದಿ ||ಜನದೊಳಾರ್ಗಾವ ಸೊಗವಾದೊಡಂ ತನದೆನ್ನು- |ತನುಭವಿಪನೋ ಜ್ಞಾನಿ - ಮಂಕುತಿಮ್ಮ ||

ನಾಚಿಕೆಯದೇಕೆ ನೀಂ ಬದುಕಿನಲಿ ಸೊಗವಡಲು? |ಚಾಚುತಿಹುದಾತ್ಮ ನಾಲಗೆಯ ದೆಸೆದೆಸೆಗೆ ||ಬಾಚಿಕೊಳಲಮೃತಕಣಗಳನ್ನೆಲ್ಲ ತನ್ನೆಡೆಗೆ |ಸಾಜ ಸೊಗವಾತ್ಮಂಗೆ - ಮಂಕುತಿಮ್ಮ ||

ಪೆರತೊಂದು ಬಾಳ ನೀನಾಳ್ವ ಸಾಹಸವೇಕೆ? |ಹೊರೆ ಸಾಲದೇ ನಿನಗೆ; ಪೆರರ್ಗೆ ಹೊಣೆವೋಗೆ? ||ಮರದಿ ನನೆ ನೈಜದಿಂದರಳೆ ಸೊಗವೆಲ್ಲರ್ಗೆ |ಸೆರೆಮನೆಯ ಸೇಮವೇಂ? - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ